ಬಳ್ಳಾರಿ : ಪ್ರಸ್ತಕ ಸಾಲಿಗೆ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ಮೆಟ್ರಿಕ್ ನಂತರದ ಕೊರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಸಿರಿಯಡಿ ಶಿಷ್ಯವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gujarat polls: ಇಂದು ಗುಜರಾತ್ನಲ್ಲಿ ಪ್ರಧಾನಿ ಮೋದಿ ಚುನಾವಣಾ ರ್ಯಾಲಿ
ಅರ್ಜಿಗಳನ್ನು ಕಡ್ಡಾಯವಾಗಿ ಸೇವಾಸಿಂಧು ಪೋರ್ಟಲ್ https;//sevasindu.karnataka.gov.in ಮೂಲಕ ಸಲ್ಲಿಸಿ, ಅಗತ್ಯ ದಾಖಲೆಗಳೊಂದಿಗೆ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿರುವ ಕಾಲೇಜು ಇರುವ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ಸಹಾಯವಾಣಿ ನಂ: 8277799990ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
JOBS ALEART: KMF ನಿಂದ 487 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ