ಶಿವಮೊಗ್ಗ: ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣ ಸಂಬಂಧ ಪೊಲೀಸರ ತನಿಖೆ ತೀವ್ರಗೊಂಡಿದೆ. ವಿವಿಧ ಹಂತಗಳಲ್ಲಿ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. ಶಂಕಿತ ಉಗ್ರ ತಾರೀಕ್ ಮೈಸೂರಿನ ಬಾಡಿಗೆ ಮನೆಯಲ್ಲಿ ಕುಕ್ಕರ್ ಬಾಂಬ್ ತಯಾರಿಸಿದ್ದಾಗಿ ಪ್ರಾಥಮಿಕ ತನಿಖೆಯಿಂದ ಮಾಹಿತಿ ಹೊರಬಿದ್ದಿದೆ ಎನ್ನಲಾಗಿದೆ. ಈ ನಡುವೆ ಶಿವಮೊಗ್ಗ ಬ್ಲಾಸ್ ಗೂ ಮಂಗಳೂರು ಬ್ಲಾಸ್ಟ್ ಗೂ ಲಿಂಕ್ ಇರೋ ಶಂಕೆ ವ್ಯಕ್ತವಾಗಿದೆ. ಹೀಗಾಗಿಯೇ ತೀರ್ಥಹಳ್ಳಿಯಲ್ಲಿ ಪೊಲೀಸರು ಪರಿಶೀಲನೆಯಲ್ಲಿ ತೊಡಗಿರೋದಲ್ಲದೇ, ಹಲವರನ್ನು ವಿಚಾರಣೆಗೂ ಒಳಪಡಿಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಂಗಳೂರು ಬಾಂಬ್ ಬ್ಲಾಸ್ ಪ್ರಕರಣ ಸಂಬಂಧ ಶಿವಮೊಗ್ಗ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಶಂಕಿತ ಉಗ್ರ ತಾರೀಕ್ ಇದ್ದಂತ ತೀರ್ಥಹಳ್ಳಿಯ ಮಾಜ್ ಮನೆಗಳಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಬಾಳೆ ಬೈಲು, ಸೊಪ್ಪುಗುಡ್ಡೆಯ ಮೂರು ಮನೆಗಳಲ್ಲಿಯೂ ತಪಾಸಣೆಯನ್ನು ನಡೆಸುತ್ತಿದ್ದಾರೆ.
‘ಪಡಿತರ ಚೀಟಿದಾರ’ರಿಗೆ ಬಿಗ್ ಶಾಕ್ ; ಕೇಂದ್ರ ಸರ್ಕಾರ ಮಹತ್ವದ ಘೋಷಣೆ, ಆ ಎಲ್ಲ ‘ಕಾರ್ಡ್’ ರದ್ದು
ಸುಮಾರು 15ಕ್ಕೂ ಹೆಚ್ಚು ಪೊಲೀಸರು ತೀರ್ಥಹಳ್ಳಿಯಲ್ಲಿ ಬೀಡು ಬಿಟ್ಟಿದ್ದು, ತೀರ್ಥಹಳ್ಳಿ ಠಾಣೆ ಇನ್ಸ್ ಪೆಕ್ಟರ್ ಅಶ್ವಥಗೌಡ, ಮಾಳೂರು ಠಾಣೆ ಇನ್ಸ್ ಪೆಕ್ಟರ್ ಪ್ರವೀಣ್ ನೀಲಮ್ಮ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ.
ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣ ಸಂಬಂಧ ತೀರ್ಥಹಳ್ಳಿಯಲ್ಲಿ ಶಂಕಿತ ತಾರೀಕ್ ಜೊತೆಗೆ ಸಂಪರ್ಕ ಹೊಂದಿದ್ದರು ಎಂಬ ಅನುಮಾನದ ಮೇಲೆ ಹಲವರನ್ನು ವಿಚಾರಣೆಗೆ ಪೊಲೀಸರು ಒಳಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಎಲ್ಲಾ ಘಟನೆಯಿಂದಾಗಿ ತೀರ್ಥಹಳ್ಳಿಯ ಜನತೆ ಆತಂಕಗೊಂಡಿದ್ದಾರೆ.