ಶಿವಮೊಗ್ಗ: 2022-23ನೇ ಮುಂಗಾರು ಹಂಗಾಮಿನ ಬೆಳೆಗಳಿಗೆ ಹರಿಸಲಾಗುತ್ತಿರುವ ನೀರನ್ನು ನಿಲ್ಲಿಸುವ ಬಗ್ಗೆ ನ.16ರ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅದರಂತೆ ನ.25ರಿಂದ ಭದ್ರಾ ನಾಲೆಗಳಿಗೆ ನೀರು ಬಿಡಲಾಗುತ್ತಿದೆ.
ಈ ಕುರಿತಂತೆ ಭದ್ರಾ ಯೋಜನಾ ವೃತ್ತದ ಅಧೀಕ್ಷಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿ: 25/11/2022 ರಿಂದ ಭದ್ರಾ ಜಲಾಶಯದಿಂದ ಭದ್ರಾ ಬಲ ಮತ್ತು ಎಡದಂಡೆ ನಾಲೆ, ಆನವೇರಿ ಶಾಖಾ ನಾಲೆ, ದಾವಣಗೆರೆ, ಮಲೇಬೆನ್ನೂರು ಶಾಖಾ ನಾಲೆ ಮತ್ತು ಹರಿಹರ ಶಾಖಾ ನಾಲೆಗಳಿಗೆ ಹರಿಸುತ್ತಿರುವ ನೀರನ್ನು ನಿಲ್ಲಸಲಾಗುವುದು. ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ಎಲ್ಲಾ ರೈತರು ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಿರುತ್ತಾರೆ.
‘ಪಡಿತರ ಚೀಟಿದಾರ’ರಿಗೆ ಬಿಗ್ ಶಾಕ್ ; ಕೇಂದ್ರ ಸರ್ಕಾರ ಮಹತ್ವದ ಘೋಷಣೆ, ಆ ಎಲ್ಲ ‘ಕಾರ್ಡ್’ ರದ್ದು
ಜನ ಸಂಪರ್ಕ ಸಭೆ
ಶಿವಮೊಗ್ಗ ನಗರ ಉಪವಿಭಾಗ-3 ರ ಕಚೇರಿಯಲ್ಲಿ ನವೆಂಬರ್ 22 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಜನ ಸಂಪರ್ಕ ಸಭೆ ಏರ್ಪಡಿಸಲಾಗಿದ್ದು ಮೆಸ್ಕಾ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸುವರು. ಈ ವ್ಯಾಪ್ತಿಯ ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಅಹವಾಲುಗಳನ್ನು ನೀಡಿ, ಸಭೆಯ ಸದುಪಯೋಗ ಪಡೆಯುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.