ಬೆಂಗಳೂರು : ನೆಲ-ಜಲ-ಭಾಷೆಯ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗೆ ಬದ್ಧವಾಗಿ ರಾಜ್ಯ ಸರ್ಕಾರ ಕೈಗೊಳ್ಳುವ ಕ್ರಮಗಳನ್ನು ನಮ್ಮ ಪಕ್ಷ ಬೆಂಬಲಿಸುತ್ತದೆ. ಕಾಲವ್ಯಯ ಮಾಡದೆ ಅವರು ವಿರೋಧ ಪಕ್ಷಗಳ ಸಭೆ ಕರೆದು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್ನಲ್ಲಿ ತಮ್ಮ ರಾಜ್ಯ ಮಂಡಿಸಬೇಕಾದ ವಾದದ ಬಗ್ಗೆ ಸಮಾಲೋಚನೆ ನಡೆಸಲು ವಿರೋಧ ಪಕ್ಷಗಳ ಸದಸ್ಯರನ್ನೊಳಗೊಂಡ ಸಮಿತಿ ರಚಿಸಿರುವುದು ಆ ರಾಜ್ಯ ಗಡಿವಿವಾದವನ್ನು ಎಷ್ಟೊಂದು ಗಂಭೀರವಾಗಿ ಸ್ವೀಕರಿಸಿದೆ ಎನ್ನುವುದಕ್ಕೆ ಸಾಕ್ಷಿ ಎಂದಿದ್ದಾರೆ.
ಬೆಳಗಾವಿ ಗಡಿ ವಿವಾದದ ಬಗ್ಗೆ ನವಂಬರ್ 23ರಂದು ಸುಪ್ರೀಂ ಕೋರ್ಟ್ ನಡೆಸಲಿರುವ ವಿಚಾರಣೆಯನ್ನು ಎದುರಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಭರದಿಂದ ಸಿದ್ಧತೆ ನಡೆಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ನೆಲ-ಜಲ-ಭಾಷೆಯ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗೆ ಬದ್ಧವಾಗಿ ರಾಜ್ಯ @BJP4Karnataka ಸರ್ಕಾರ ಕೈಗೊಳ್ಳುವ ಕ್ರಮಗಳನ್ನು ನಮ್ಮ ಪಕ್ಷ ಬೆಂಬಲಿಸುತ್ತದೆ. ಕಾಲವ್ಯಯ ಮಾಡದೆ @CMofKarnataka ಅವರು ವಿರೋಧ ಪಕ್ಷಗಳ ಸಭೆ ಕರೆದು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸಮಾಡಬೇಕು. 4/4#ಬೆಳಗಾವಿಗಡಿವಿವಾದ
— Siddaramaiah (@siddaramaiah) November 21, 2022
ಸುಪ್ರೀಂ ಕೋರ್ಟ್ನಲ್ಲಿ ತಮ್ಮ ರಾಜ್ಯ ಮಂಡಿಸಬೇಕಾದ ವಾದದ ಬಗ್ಗೆ ಸಮಾಲೋಚನೆ ನಡೆಸಲು ವಿರೋಧ ಪಕ್ಷಗಳ ಸದಸ್ಯರನ್ನೊಳಗೊಂಡ ಸಮಿತಿ ರಚಿಸಿರುವುದು ಆ ರಾಜ್ಯ ಗಡಿವಿವಾದವನ್ನು ಎಷ್ಟೊಂದು ಗಂಭೀರವಾಗಿ ಸ್ವೀಕರಿಸಿದೆ ಎನ್ನುವುದಕ್ಕೆ ಸಾಕ್ಷಿ. 3/4#ಬೆಳಗಾವಿಗಡಿವಿವಾದ
— Siddaramaiah (@siddaramaiah) November 21, 2022
ಬೆಳಗಾವಿ ಗಡಿ ವಿವಾದದ ಬಗ್ಗೆ ನವಂಬರ್ 23ರಂದು ಸುಪ್ರೀಂ ಕೋರ್ಟ್ ನಡೆಸಲಿರುವ ವಿಚಾರಣೆಯನ್ನು ಎದುರಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಭರದಿಂದ ಸಿದ್ಧತೆ ನಡೆಸಿದ್ದಾರೆ. 2/4#ಬೆಳಗಾವಿಗಡಿವಿವಾದ
— Siddaramaiah (@siddaramaiah) November 21, 2022
ಪಿಂಚಣಿ ಮಾಡಿಸೋ ನೆಪದಲ್ಲಿ ವೃದ್ದೆಯರಿಂದ ಸರ ಅಪಹರಿಸುತ್ತಿದ್ದ ವಂಚನ ಬಂಧನ
BIG NEWS: ಕುಕ್ಕರ್ ಬಾಂಬ್ ಬೆನ್ನಲೇ ಮಂಗ್ಳೂರಿನ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ