ಬೆಂಗಳೂರು: ಮಂಗಳೂರಿನಲ್ಲಿ ಸಂಭವಿಸಿದ ಪ್ರೆಷರ್ ಕುಕ್ಕರ್ ಸ್ಪೋಟದ ತನಿಖೆ ಚುರುಕುಗೊಂಡಿದೆ. ಪ್ರಮುಖ ಆರೋಪಿಯ ವೈಯಕ್ತಿಕ ಮಾಹಿತಿಗಳನ್ನು ಪೊಲೀಸರು ಪಡೆದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಸಂಪರ್ಕ ಯಾವ ಊರುಗಳಲ್ಲಿದೆ ಎಂಬುದರ ಮಾಹಿತಿಯೂ ಲಭಿಸಿದೆ. ಆತನ ನಿಜವಾದ ಹೆಸರು ಹಾಗೂ ಗುರುತು ಪತ್ತೆಯಾದ ನಂತರ, ಆತ ಬೇರೆಯಾವ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯಲಿದೆ. ಆ ಜಾಡನ್ನು ಹಿಡಿದು ತನಿಖೆ ನಡೆಯುತ್ತಿದೆ ಎಂದರು.
ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲು ಪೊಲೀಸರಿಗೆ ಸೂಚನೆ
ಆರೋಪಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಕುಟುಂಬ ವರ್ಗದವರು ಆತನ ಗುರುತಿಸಿರುವುದು ಪ್ರಮುಖ ಬೆಳೆವಣಿಗೆ. ಇಲ್ಲಿಯವರೆಗಿನ ಎಲ್ಲ ಮಾಹಿತಿಗಳನ್ನು ರಾಷ್ಟ್ರೀಯ ತನಿಖಾ ದಳ ಹಾಗೂ ಐಬಿ ಗೆ ನೀಡಲಾಗಿದೆ. ಇದೇ ರೀತಿಯ ಕೃತ್ಯಗಳು ಬೇರೆ ಕಡೆಯೂ ಮಾಡಿದ್ದರೆ ಎಂಬುದು, ಈ ಘಟನೆಯ ಹಿಂದಿನ ಸಂಘಟನೆ ಬಗ್ಗೆ ಮಾಹಿತಿಗಳು ತಿಳಿಯಬೇಕಿದೆ. ಈ ನಿಟ್ಟಿನಲ್ಲಿಯೂ ತನಿಖೆ ಮುಂದುವರೆದಿದ್ದು, ವಿಷಯಗಳು ಲಭ್ಯವಾದ ನಂತರ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಎಲ್ಲ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪೊಲೀಸರು, ಭಯೋತ್ಪಾದಕ ನಿಗ್ರಹ ದಳ, ಆಂತರಿಕ ಸುರಕ್ಷತಾ ವಿಭಾಗಗಳು ಸಂಯೋಜಿಸಿ ಕಾರ್ಯನಿರ್ವಹಿಸಬೇಕು. ತನಿಖೆಯನ್ನು ಚುರುಕುಗೊಳಿಸಿ , ಹಿಂದಿರುವ ಘಾತುಕ ಶಕ್ತಿಗಳನ್ನು ಬಹಿರಂಗಗೊಳಿಸಬೇಕು ಎಂದರು.
BREAKING NEWS: ಕಾಡಾನೆ ಹಾವಳಿ: ಪ್ರತಿ ಜಿಲ್ಲೆಗೊಂದು ಆನೆ ಟಾಸ್ಕ್ ಫೋರ್ಸ್ ರಚನೆಗೆ ರಾಜ್ಯ ಸರ್ಕಾರ ಆದೇಶ
ಸಿದ್ದರಾಮಯ್ಯನವರು ರಾಜ್ಯದಲ್ಲಿ ಕಾನೂನು ವ್ಯವಸ್ಥೆ ವಿಫಲವಾಗಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ,ಕಾಂಗ್ರೆಸ್ ಕಾಲದಲ್ಲಿಯೂ ಇಂತಹ ಹಲವಾರು ಘಟನೆಗಳು ಸಂಭವಿಸಿವೆ. ಇದು ರಾಜಕೀಯ ಪ್ರೇರಿತ ಹೇಳಿಕೆ. ಇಂತಹ ಹೇಳಿಕೆಗಳಿಗೆ ಮಹತ್ವ ನೀಡುವುದಿಲ್ಲ ಎಂದರು.