ಬೆಂಗಳೂರು: ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಕೆಯಾಗಿದೆ.
ಕೊಪ್ಪಳ ಜಿಲ್ಲೆಯ ಐದು ಕ್ಷೇತ್ರಗಳ ಅಭ್ಯರ್ಥಿ ಹೆಸರನ್ನು ಈಗಾಗಲೇ ಘೋಷಣೆ ಮಾಡಿದ್ದಾರೆ ಎಂಬ ವಿಚಾರವಾಗಿ ದೂರು ಸಲ್ಲಿಕೆಯಾಗಿದೆ, ಕಾಂಗ್ರೆಸ್ ಮುಖಂಡ ಮುಕುಂದರಾವ್ ಭವಾನಿಮಠ ಎಂಬುವವರು ದೂರು ನೀಡಿದ್ದಾಗಿ ಹೇಳಿಕೊಂಡಿದ್ದಾರೆ.
ಈ ಬಗ್ಗೆ ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮುಕುಂದರಾವ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಅವರದ್ದೇ ಆದ ನಿಯಮಗಳಿದೆ, ನಾನು ಕನಕಗಿರಿ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಅರ್ಜಿ ಸಲ್ಲಿಸಿದ್ದೇನೆ. ಆದರೆ ಅಷ್ಟರಲ್ಲಿ ಸಿದ್ದರಾ,ಮಯ್ಯ ಐದು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ, ಒಬ್ಬರು ಹಿರಿಯರಾಗಿ ಹೀಗೆ ಮಾಡುವುದು ತಪ್ಪು ಎಂದು ಹೇಳಿದ್ದಾರೆ.
ಅಭ್ಯರ್ಥಿಗಳ ಘೋಷಣೆ ವಿಚಾರದಲ್ಲಿ ಡಿಕೆಶಿ ಅಸಮಾಧಾನ
ಅಭ್ಯರ್ಥಿಗಳ ಘೋಷಣೆ ಹಕ್ಕು ಸಿದ್ದರಾಮಯ್ಯ ಅವರಿಗೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಿನ್ನೆ ಕೊಪ್ಪಳದ ಮದುವೆ ಸಮಾರಂಭದ ವೇದಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸಿದ್ದರಾಮಯ್ಯ ಅವರು ಘೋಷಣೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯ ಅವರಿಗೆ ಇಲ್ಲ, ನನಗೂ ಘೋಷಣೆ ಮಾಡುವ ಹಕ್ಕಿಲ್ಲ. ಎಐಸಿಸಿಗೆ ಮಾತ್ರ ಹಕ್ಕು ಇದೆ ಎಂದಿದ್ದಾರೆ.
ಸಿದ್ದರಾಮಯ್ಯ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಕೆಲ ಸಂದರ್ಭಗಳಲ್ಲಿ ಕಳೆದ ಸೋಲು ಕಂಡವರಿಗೆ ಎನ್ಕರೇಜ್ ಮಾಡಿ ಹೇಳಿರಬಹುದು. ಅದನ್ನು ಬಿಟ್ಟರೆ ಮಲ್ಲಿಕಾರ್ಜುನ ಖರ್ಗೆ ಅವರೇ ನಮಗೆ ಹೈಕಮಾಂಡ್, ಅವರಿಗೆ ಘೋಷಣೆ ಮಾಡುವ ಹಕ್ಕಿದೆ. ನನಗೂ ಕೂಡ ಆ ಹಕ್ಕಿಲ್ಲ ಎಂದು ಒತ್ತಿ ಹೇಳಿದ್ದಾರೆ.
BREAKING NEWS: ಕಾಡಾನೆ ಹಾವಳಿ: ಪ್ರತಿ ಜಿಲ್ಲೆಗೊಂದು ಆನೆ ಟಾಸ್ಕ್ ಫೋರ್ಸ್ ರಚನೆಗೆ ರಾಜ್ಯ ಸರ್ಕಾರ ಆದೇಶ
BREAKING NEWS: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ: ರಾಜ್ಯಾಧ್ಯಂತ ಕಟ್ಟೆಚ್ಚರಕ್ಕೆ ಸಿಎಂ ಬೊಮ್ಮಾಯಿ ಸೂಚನೆ