ಬೆಂಗಳೂರು : ಮುಂಬರುವಂತ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು, ಇಂದು ಕ್ಷೇತ್ರದ ಗುಟ್ಟು ಬಿಟ್ಟುಕೊಡದೇ ಕಾಂಗ್ರೆಸ್ ಟಿಕೆಟ್ ಗೆ ಕೆ.ಹೆಚ್ ಮುನಿಯಪ್ಪ ಅರ್ಜಿ ಸಲ್ಲಿಸಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಕೆ.ಹೆಚ್ ಮುನಿಯಪ್ಪ ಆಪ್ತರು ಕ್ಷೇತ್ರದ ಹೆಸರನ್ನು ಅರ್ಜಿಯಲ್ಲಿ ಉಲ್ಲೇಖಿಸದೇ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಅರ್ಜಿಯಲ್ಲಿ ಹೈಕಮಾಂಡ್ ಸೂಚನೆ ಮೇರೆಗೆ ಕ್ಷೇತ್ರದ ಆಯ್ಕೆ ಎಂದು ಅರ್ಜಿ ಸಲ್ಲಿಸಿದ್ದು, ಕ್ಷೇತ್ರವನ್ನು ಫೈನಲ್ ಮಾಡುವ ನಿರ್ಧಾರವನ್ನು ಹೈಕಮಾಂಡ್ ಗೆ ನೀಡಿದ್ದಾರೆ.
ಇನ್ನೂ, ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಇಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದಾಗಿ ಅರ್ಜಿ ಸಲ್ಲಿಕೆ ವೇಳೆ ತಿಳಿಯಲಿದೆ ಎಂದು ಹೇಳಲಾಗಿತ್ತು. ಆದ್ರೇ ಕೊನೆಗೂ ಕ್ಷೇತ್ರದ ಗುಟ್ಟು ಬಿಟ್ಟುಕೊಡದ ಸಿದ್ಧರಾಮಯ್ಯ, ತನ್ನ ಪರಮಾಪ್ತರ ಮೂಲಕ ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆ.
BREAKING NEWS: ‘ಕಾಡಾನೆ ಹಾವಳಿ ತಡೆ’ಗೆ 4 ಜಿಲ್ಲೆಗಳಿಗೆ ‘ಎಲಿಪೆಂಟ್ ಟಾಸ್ಕ್ ಪೋರ್ಸ್’ ರಚಿಸಿ ‘ರಾಜ್ಯ ಸರ್ಕಾರ’ ಆದೇಶ
ಕೊಪ್ಪಳದ ಐದು ಕ್ಷೇತ್ರದಲ್ಲಿ ಅಭ್ಯರ್ಥಿ ಹೆಸರು ಘೋಷಿಸಿದ ಸಿದ್ದುಗೆ ಸಂಕಷ್ಟ : ‘AICC’ ಗೆ ಕಾಂಗ್ರೆಸ್ ದೂರು