ಬೆಂಗಳೂರು ; ಚಳಿಗೆ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೆ ಮಳೆಯ ಶಾಕ್ ಎದುರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯದಲ್ಲಿ ಮಳೆ ಶುರುವಾಗಲಿದೆ. ಹೀಗಾಗಿ ಚಳಿಯ ಜೊತೆ ಮಳೆಯೂ ಇರಲಿದೆ. ನವೆಂಬರ್ 22 ರ ಇಂದಿನಿಂದ ನವೆಂಬರ್ 24 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ವಿಜಯಪುರ, ಹಾವೇರಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : 2023ರಲ್ಲಿ ಸಿಗಲಿವೆ 19 ಸರ್ಕಾರಿ ರಜೆ ದಿನ