ಕೋಲಾರ : ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ದಲಿತರಿಗೆ ಉಪಮುಖ್ಯಮಂತ್ರಿ ಪಟ್ಟ ನೀಡಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.
ಕೋಲಾರದ ಮಾಲೂರಿನಲ್ಲಿ ಪಂಚರತ್ನ ಯಾತ್ರೆಯಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಅಧಿಕಾರಕ್ಕೆ ಬಂದರೆ ಮಹಿಳಾ ಸಂಘಗಳ ಸಾಲ ಮನ್ನಾ ಮಾಡಲಾಗುವುದು. ಸಬ್ಸಿಡಿಯಡಿ ಇನ್ನೂ ಹೆಚ್ಚಿನ ಸಾಲ ನೀಡಲಾಗುವುದು. ಪ್ರತಿ ಪಂಚಾಯಿತಿಯಲ್ಲಿ ಸುಸಜ್ಜಿತ ಸರ್ಕಾರಿ ಆಸ್ಪತ್ರೆ ಹಾಗೂ ಶಾಳೆ ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.
BIGG NEWS : ರಾಜ್ಯದ ಜನತೆಗೆ ಬಿಗ್ ಶಾಕ್ : ನಂದಿನಿ ಹಾಲಿನ ದರ 2 ರೂ. ಹೆಚ್ಚಳ!
ಸಿಕ್ಕ ಅವಕಾಶದಲ್ಲಿ ನೀಡಿದ್ದ ಭರವಸೆಯಂತೆ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ರೈತರ ಸಾಲ ಮನ್ನಾ ಮಾಡಿದೆ. ಈ ಬಾರೀ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಮಹಿಳಾ ಸಂಘಗಳ ಸಾಲ ಮನ್ನಾ ಮಾಡುತ್ತೇನೆ ಎಂದು ತಿಳಿಸಿದ್ದಾರೆ.