ಕೊಪ್ಪಳ : ಜಾನುವಾರುಗಳಲ್ಲಿ ಚರ್ಮಗಂಟು ರೋಗ ಹರಡುವಿಕೆಯನ್ನು ತಡೆಯುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ನಿಷೇಧವನ್ನು ಡಿಸೆಂಬರ್ 23ರ ವರೆಗೆ ಮುಂದುವರಿಸಿ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ್ ಬಾಬು ಅವರು ಆದೇಶ ಹೊರಡಿಸಿದ್ದಾರೆ.
BIGG NEWS : ಮಂಗಳೂರು ಆಟೋದಲ್ಲಿ ಸ್ಪೋಟ ಪ್ರಕರಣ : ಶಂಕಿತ ಉಗ್ರ ಶಾರಿಕ್ ವಾಟ್ಸಪ್ ಡಿಪಿಯಲ್ಲಿ ಶಿವನ ಫೋಟೋ!
ಜಿಲ್ಲೆಯಲ್ಲಿ ದನ, ಎಮ್ಮೆಗಳಲ್ಲಿ ಜಾನುವಾರು ಚರ್ಮಗಂಟು ರೋಗ (Lumpy Skin Disease) ಕಾಣಿಸಿಕೊಂಡು ವ್ಯಾಪಕವಾಗಿ ಹರಡುತ್ತಿದ್ದು, ಈ ಕುರಿತು ರೋಗ ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಕೊಪ್ಪಳ ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾನುವಾರು ಜಾತ್ರೆ ಜರುಗಿಸುವುದು ಮತ್ತು ಜಾನುವಾರು ಸಾಗಾಣಿಕೆ ನಿಷೇಧವನ್ನು ನವೆಂಬರ್ 24 ರವರೆಗೆ ನಿಷೇಧಿಸಲಾಗಿತ್ತು. ಈ ನಿಷೇಧವನ್ನು ಮುಂದುವರೆಸುವಂತೆ ಪಶುಪಾಲನಾ ಮತ್ತು ಪಶು ಸೇವಾ ಇಲಾಖೆಯ ಉಪ ನಿರ್ದೇಶಕರು ಕೋರಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ನಿಷೇಧವನ್ನು ಡಿಸೆಂಬರ್ 23ರ ವರೆಗೆ ವಿಸ್ತರಿಸಿ ಸಿ.ಆರ್.ಪಿ.ಸಿ ಕಾಯ್ದೆ 1973ರ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಲಾಗಿದೆ.
ಈ ಆದೇಶವು ದನ, ಎಮ್ಮೆಗಳ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆಗೆ ಮಾತ್ರ ಅನ್ವಯವಾಗುತ್ತದೆ. ಇದನ್ನು ಹೊರತುಪಡಿ ಬೇರೆ ಯಾವುದೇ ಉದ್ದೇಶಕ್ಕೆ ಅನ್ವಯವಾಗುವುದಿಲ್ಲ. ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188ರ ಪ್ರಕಾರ ಕ್ರಮ ಕೈಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ಸೂಚನೆ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.