ನವದೆಹಲಿ: : ದೆಹಲಿ ಸರ್ಕಾರದ ಸಚಿವ ಸತ್ಯೇಂದ್ರ ಜೈನ್ ಅವರು ತಿಹಾರ್ ಜೈಲಿನಲ್ಲಿ ಮಸಾಜ್ ಮಾಡಿಸಿಕೊಂಡಿರುವ ವ್ಯಕ್ತಿ ಮೇಳೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಅವರ ಮೇಲೆ ಪೋಕ್ಸೊ ಸೆಕ್ಷನ್ 6 ಮತ್ತು ಐಪಿಸಿ ಸೆಕ್ಷನ್ 376, 506 ಮತ್ತು 509 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿ ಸತ್ಯೇಂದ್ರ ಜೈನ್ಗೆ ತಿಹಾರ್ ಜೈಲಿನಲ್ಲಿ ಮಸಾಜ್ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಇತ್ತೀಚೆಗೆ, ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿದ್ದವು. ಅದರಲ್ಲಿ ವ್ಯಕ್ತಿಯೊಬ್ಬ ಸತ್ಯೇಂದ್ರ ಜೈನ್ ಅವರ ಪಾದಗಳು ಮತ್ತು ದೇಹವನ್ನು ಮಸಾಜ್ ಮಾಡುತ್ತಿರುವುದು ಕಂಡುಬಂದಿದೆ.
ಫಿಸಿಯೋಥೆರಪಿಸ್ಟ್ ಅಲ್ಲ, ಅತ್ಯಾಚಾರ ಆರೋಪಿ ಮಸಾಜ್ ಮಾಡುತ್ತಿದ್ದ : ತಿಹಾರ್ ಜೈಲಿನ ಅಧಿಕೃತ ಮೂಲಗಳಿಂದ ಪಡೆದ ಮಾಹಿತಿಯ ಪ್ರಕಾರ, ಸತ್ಯೇಂದ್ರ ಜೈನ್ ಅವರಿಗೆ ಮಸಾಜ್ ಮಾಡುವ ವ್ಯಕ್ತಿ ರಿಂಕು ಎಂಬ ಕೈದಿಯಾಗಿದ್ದು, ಫಿಸಿಯೋಥೆರಪಿಸ್ಟ್ ಅಲ್ಲ. ರಿಂಕು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೈಲಿನಲ್ಲಿದ್ದಾನೆ ಮತ್ತು ಪೋಕ್ಸೊ ಸೆಕ್ಷನ್ 6 ಮತ್ತು ಐಪಿಸಿ ಸೆಕ್ಷನ್ 376, 506 ಮತ್ತು 509 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ.