ಮೇಘಾಲಯ : ಇಂದು ಬೆಳಗ್ಗೆ ಅಸ್ಸಾಂ-ಮೇಘಾಲಯ ಗಡಿಯಲ್ಲಿ ಮರವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟ್ರಕ್ ಅನ್ನು ಪೊಲೀಸರು ತಡೆದ ನಂತರ ನಡೆದ ಘರ್ಷಣೆಯಲ್ಲಿ ಅರಣ್ಯ ಸಿಬ್ಬಂದಿ ಸೇರಿದಂತೆ ಆರು ಜನಋಊ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಮೇಘಾಲಯ ಸರ್ಕಾರವು 48 ಗಂಟೆಗಳ ಕಾಲ ಏಳು ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ.
ಮಂಗಳವಾರ ಮುಂಜಾನೆ ಪಶ್ಚಿಮ ಕರ್ಬಿ ಅಂಗ್ಲಾಂಗ್ ಜಿಲ್ಲೆಯ ಅಸ್ಸಾಂ-ಮೇಘಾಲಯ ಗಡಿಯಲ್ಲಿ ಅಕ್ರಮ ಮರವನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ತಡೆದ ನಂತರ ನಡೆದ ಹಿಂಸಾಚಾರದಲ್ಲಿ ಅರಣ್ಯ ಸಿಬ್ಬಂದಿ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Meghalaya government suspends Mobile Internet services in 7 districts for 48 hours from Nov 22 onwards, following the firing incident in Mukoh where four persons were killed. https://t.co/GCSNYJMnGY pic.twitter.com/KTlUMscMLH
— ANI (@ANI) November 22, 2022
ಅಕ್ರಮ ಮರ ಸಾಗಿಸುತ್ತಿದ್ದ ಟ್ರಕ್ ಅನ್ನು ಮುಕ್ರು ಪ್ರದೇಶದಲ್ಲಿ ಅಸ್ಸಾಂ ಅರಣ್ಯ ಇಲಾಖೆ ತಂಡ ತಡೆದು ನಿಲ್ಲಿಸಿದೆ. ಮುಂಜಾನೆ 3 ಗಂಟೆ ಸುಮಾರಿಗೆ ಟ್ರಕ್ ಮೇಘಾಲಯದ ಪಶ್ಚಿಮ ಜೈನ್ತಿಯಾ ಹಿಲ್ಸ್ ಜಿಲ್ಲೆಯ ಕಡೆಗೆ ಹೋಗುತ್ತಿತ್ತು ಎಂದು ಪಶ್ಚಿಮ ಕರ್ಬಿ ಆಂಗ್ಲಾಂಗ್ ಪೊಲೀಸ್ ವರಿಷ್ಠಾಧಿಕಾರಿ ಇಮ್ದಾದ್ ಅಲಿ ತಿಳಿಸಿದ್ದಾರೆ.
ಟ್ರಕ್ ಪರಾರಿಯಾಗಲು ಪ್ರಯತ್ನಿಸುತ್ತಿದ್ದಂತೆ, ಅರಣ್ಯ ಸಿಬ್ಬಂದಿ ಮೇಲೆ ಗುಂಡು ಹಾರಿಸಿ ಟೈರ್ ಅನ್ನು ಗಾಳಿ ಮಾಡಿದರು. ನಂತರ ಚಾಲಕ, ಕೈಯಾಳು ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಲಾಯಿತು. ಆದರೆ ಇತರರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮೇಘಾಲಯ ಸಿಎಂ ಕಾನ್ರಾಡ್ ಸಂಗಮ್, ಘಟನೆಯಲ್ಲಿ ಮೇಘಾಲಯದ ಐವರು ಮತ್ತು ಒಬ್ಬ ಅಸ್ಸಾಂ ಫಾರೆಸ್ಟ್ ಗಾರ್ಡ್ ಸೇರಿದಂತೆ ಒಟ್ಟು ಆರು ಮಂದಿ ಸಾವನ್ನಪ್ಪಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಪ್ರಕರಣದಲ್ಲಿ ಮೇಘಾಲಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆಯನ್ನು ಪ್ರಾರಂಭಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.
BIGG NEWS : ರಾಜ್ಯದ ಶಾಲಾ-ಕಾಲೇಜುಗಳಲ್ಲಿ ನ.26 ರಂದು ‘ಸಂವಿಧಾನ ದಿನ’ ಆಚರಿಸುವಂತೆ ಶಿಕ್ಷಣ ಇಲಾಖೆ ಆದೇಶ