ಬೆಂಗಳೂರು : ಅಕ್ರಮ ವೋಟರ್ ಐಡಿ ಪ್ರಕರಣ ರಾಜ್ಯದಲ್ಲಿ ಭಾರೀ ಚರ್ಚೆ, ಟೀಕೆಗೆ ಕಾರಣವಾಗಿದ್ದು , ಸೂಕ್ತ ತನಿಖೆ ನಡೆಸುವಂತೆ ವಿಪಕ್ಷಗಳು ಒತ್ತಾಯಿಸಿದೆ.
ಈ ಬೆನ್ನಲ್ಲೇ ಇದೀಗ ಕೇಂದ್ರ ಚುನಾವಣಾ ಆಯೋಗ ತಂಡ ಬೆಂಗಳೂರಿಗೆ ಆಗಮಿಸಿದೆ. ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳ ಜೊತೆ ತಂಡ ಸಭೆ ನಡೆಸಲಿದ್ದು, ಆರೋಪದ ಬಗ್ಗೆ ಮಾಹಿತಿ ಸಂಗ್ರಹ ಮಾಡಲಿದೆ.
ಕಾಂಗ್ರೆಸ್ ನಾಯಕರು ಚುನಾವಣಾ ಅಕ್ರಮದ ದೂರು ನೀಡುತ್ತಿದ್ದಂತೆ ಕೇಂದ್ರ ಚುನಾವಣಾ ಆಯೋಗದ ಉಪ ಆಯುಕ್ತ ಅಜೇಯ್ ಭದು ಮತ್ತು ಇತರ ಅಧಿಕಾರಿಗಳು ರಾಜ್ಯ ಚುನಾವಣಾ ಮುಖ್ಯ ಅಧಿಕಾರಿ ಮನೀಜ್ ಕುಮಾರ್ ಮೀನಾರನ್ನು ಭೇಟಿಯಾಗಿ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಮತದಾರರ ಮಾಹಿತಿ ಕದ್ದ ಪ್ರಕರಣವನ್ನು ತನಿಖೆ ನಡೆಸುವಂತೆ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಈ ದೂರಿನ ಹಿನ್ನಲೆ ಆರೋಪಗಳ ಬಗ್ಗೆ ಪರಿಶೀಲನೆ ನಡೆಸಲು ತಂಡ ಬೆಂಗಳೂರು ನಗರಕ್ಕೆ ಆಗಮಿಸಿದೆ. ಇನ್ನೂ, ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರದ ಹಲಸೂರು ಗೇಟ್ ಠಾಣೆ ಪೊಲೀಸರು ಈಗಾಗಲೇ ಪ್ರಕರಣದ ತನಿಖೆ ಕೈಗೊಂಡಿದ್ದು, ತನಿಖೆ ಚುರುಕುಗೊಂಡಿದೆ. ಈ ಸಂಬಂಧ ಬಿಬಿಎಂಪಿ ಹಲವರನ್ನು ಅಮಾನತು ಮಾಡಿ, ಹಲವರಿಗೆ ನೋಟಿಸ್ ಜಾರಿ ಮಾಡಿದೆ.
BIGG NEWS : ರಾಜ್ಯದ ಶಾಲಾ-ಕಾಲೇಜುಗಳಲ್ಲಿ ನ.26 ರಂದು ‘ಸಂವಿಧಾನ ದಿನ’ ಆಚರಿಸುವಂತೆ ಶಿಕ್ಷಣ ಇಲಾಖೆ ಆದೇಶ