ಚಿತ್ರದುರ್ಗ : ವಾಣಿವಿಲಾಸ ಜಲಾಶಯ ಅಭಿವೃದ್ಧಿಗೆ ಸರ್ಕಾರ 738 ಕೋಟಿ ರೂ. ಅನುದಾನ ಮೀಸಲಿಟ್ಟಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿರುವ ಸಿಎಂ ಬೊಮ್ಮಾಯಿ ವಾಣಿ ವಿಲಾಸ ಕಾಲುವೆಗಳ ನವೀಕರಣ ಸೇರಿದಂತೆ ಜಲಾಶಯ ಕಾಯಕಲ್ಪಕ್ಕೆ 738 ಕೋಟಿ ರೂ ಮಂಜೂರು ಮಾಡಲಾಗುತ್ತಿದೆ ಎಂದು ಬೊಮ್ಮಾಯಿ ಹೇಳಿದರು. ಯಡಿಯೂರಪ್ಪ ಐದು ವರ್ಷಗಳಲ್ಲಿ ಏಳುವರೆ ಲಕ್ಷ ಎಕರೆಗೆ ನೀರಾವರಿ ಸೌಲಭ್ಯ ಮಾಡಿದ್ದಾರೆ. ಇಂತಹ ಒಂದು ಸಂದರ್ಭದಲ್ಲಿ ವಿವಿ ಸಾಗರಕ್ಕೆ ಬಾಗಿನ ಅರ್ಪಿಸುವ ಸೌಭಾಗ್ಯ ನನಗೆ ಮತ್ತು ಯಡಿಯೂರಪ್ಪ ಅವರಿಗೆ ಸಿಕ್ಕಿದೆ ಎಂದು ಬೊಮ್ಮಾಯಿ ಹೇಳಿದರು.
ಭದ್ರಾ ಮೇಲ್ದಂಡೆ ಯೋಜನೆಗೆ 3 ಸಾವಿರ ಕೋಟಿ ಅನುದಾನ
ಭದ್ರಾ ಮೇಲ್ದಂಡೆ ಯೋಜನೆಗೆ 3 ಸಾವಿರ ಕೋಟಿ ಅನುದಾನ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದರು.ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದೆ, ನಮ್ಮ ಪಕ್ಷ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 3 ಸಾವಿರ ಕೋಟಿ ಅನುದಾನ ಮೀಸಲು ಇಡಲಿದ್ದೇವೆ , ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆ ಎಂದು ಘೋಷಿಸಲಿದೆ. 2023 ರಲ್ಲಿ ನಮ್ಮ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದರು.
ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಯ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದರು. ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಯ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ರಾಜ್ಯ ಸರ್ಕಾರ ನೀಡಲಿದೆ, ಕರ್ನಾಟಕ ಏಕೀಕರಣ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ಮತ್ತು ಗೋವಾ ವಿಮೋಚನೆಗೆ ಕೆಲಸ ಮಾಡಿದ ಮಹಾರಾಷ್ಟ್ರದಲ್ಲಿರುವ ಕನ್ನಡಿಗರಿಗೆ ಪಿಂಚಣಿ ನೀಡಲಾಗುತ್ತದೆ, ಈ ಸಂಬಂಧ ಸರ್ಕಾರ ಅಗತ್ಯ ದಾಖಲೆಗಳನ್ನು ತರಿಸಿಕೊಳ್ಳಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
SHOCKING : ಮೊಬೈಲ್ ಅಂಗಡಿಯಲ್ಲಿ ತರಬೇತಿ ಪಡೆಯುತ್ತಲೇ ದೊಡ್ಡ ಬ್ಲಾಸ್ಟ್ ಗೆ ಶಾರೀಖ್ ಸ್ಕೆಚ್..!