ಬೆಂಗಳೂರು : ಲಂಚ ಸ್ವೀಕರಿಸುತ್ತಿದ್ದ ಗೃಹ ಸಚಿವಾಲಯದ ‘ಹೋಮ್ ಗಾರ್ಡ್’ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ರಾಜ್ಯ ಗೃಹ ಸಚಿವಾಲಯದ ‘ಹೋಮ್ ಗಾರ್ಡ್’ಸತೀಶ್ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯಿಂದ ವೈದ್ಯಕೀಯ ವೆಚ್ಚದ ಬಿಲ್ ಸಂಬಂಧ 20,000 ರೂ ಲಂಚಕ್ಕೆ ಬೇಡಿಕೆಯಿಟ್ಟಿದ್ದನು. ನಂತರ 20 ಸಾವಿರ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ, ಹೋಮ್ ಗಾರ್ಡ್ ಸತೀಶ್ ನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.