ಬೆಂಗಳೂರು : ದತ್ತು ಮಕ್ಕಳು ಅನುಕಂಪದ ನೌಕರಿ ಪಡೆಯಬಹುದು, ನೈಸರ್ಗಿಕ ಮಕ್ಕಳಿಗೂ ದತ್ತು ಮಕ್ಕಳಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ದತ್ತು ಪುತ್ರನಿಗೆ ಅನುಕಂಪದ ಆಧಾರದ ಉದ್ಯೋಗ ಲಭ್ಯವಾಗುವಿಲ್ಲ ಎಂದು ಏಕ ಸದಸ್ಯ ಪೀಠ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂಣದರಾಜು ಮತ್ತು ನ್ಯಾಯಮೂರ್ತಿ ಜಿ ಬಸವರಾಜು ಪೀಠ ೀ ಆದೇಶ ಹೊರಡಿಸಿದೆ.
ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆಯುವ ಸಂದರ್ಭದಲ್ಲಿ ದತ್ತು ಮಕ್ಕಳು ಹಾಗೂ ಸ್ವಂತ ಮಕ್ಕಳು ಎಂಬ ವ್ಯತ್ಯಾಸ ನೋಡಿದಲ್ಲಿ ದತ್ತು ತೆಗೆದುಕೊಳ್ಳುವ ಉದ್ದೇಶ ಈಡೇರುವುದಿಲ್ಲ ಎಂದು ಕೋರ್ಟ್ ತಿಳಿಸಿದೆ.
ಏನಿದು ಪ್ರಕರಣ
ಬನಹಟ್ಟಿಯ ಜೆಎಂಎಫ್ ಸಿ ಕೋರ್ಟ್ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಅವರ ಕಚೇರಿಯಲ್ಲಿ ವಿನಾಯಕ ಎಂ ಮುತ್ತಟ್ಟಿ ಎಂಬುವವರು ಗ್ರೂಪ್ ಡಿ ನೌಕರ ನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮುತ್ತಟ್ಟಿ ಅವರು 2011 ರಲ್ಲಿ ಗಿರೀಶ್ ಅವರನ್ನು ದತ್ತು ತೆಗೆದುಕೊಂಡಿದ್ದರು. ಆದರೆ 2018 ರಲ್ಲಿ ವಿನಾಯಕ ಎಂ ಮುತ್ತಟ್ಟಿ ನಿಧನರಾಗಿದ್ದರು.
ಅವರ ಹುದ್ದೆಯನ್ನು ಅನುಕಂಪದ ಆಧಾರದ ಮೇಲೆ ನೀಡುವಂತೆ ಅವರ ದತ್ತುಪುತ್ರ ಗಿರೀಶ್ ಪ್ರಾಸಿಕ್ಯೂಷನ್ ಇಲಾಖೆಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ದತ್ತು ಪುತ್ರನಿಗೆ ಅನುಕಂಪದ ಆಧಾರದ ಮೇಲೆ ಕೆಲಸ ಕೊಡುವುದಿಲ್ಲ ಎಂದು ಹೇಳಿ ಅರ್ಜಿ ತಿರಸ್ಕರಿಸಿತ್ತು, ಇದನ್ನು ಪ್ರಶ್ನಿಸಿ ಗಿರೀಶ್ ಹೈಕೋರ್ಟ್ ಮೊರೆ ಹೋಗಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್ ದತ್ತು ಮಕ್ಕಳು ಅನುಕಂಪದ ನೌಕರಿ ಪಡೆಯಬಹುದು, ನೈಸರ್ಗಿಕ ಮಕ್ಕಳಿಗೂ ದತ್ತು ಮಕ್ಕಳಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.