ಬೆಂಗಳೂರು : ರಾಜ್ಯದ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ನವೆಂಬರ್ 26ನೇ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರತ್ಯೇಕ ಆದೇಶ ಹೊರಡಿಸಿದೆ.
ಪ್ರತಿ ವರ್ಷ ನವೆಂಬರ್ 26 ಈ ದಿನವನ್ನು “ಭಾರತ ಸಂವಿಧಾನ’ವು ಭಾರತದ ಸಂವಿಧಾನ ಸಭೆಯಲ್ಲಿ ಅಂಗೀಕರಿಸಲ್ಪಟ್ಟ ದಿನವಾದ 26ನೇ ನವೆಂಬರ್ 1949ರ ಸವಿನೆನಪಿಗಾಗಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಮುಂದುವರೆದು ಉಲ್ಲೇಖಿತ (2)ರಲ್ಲಿ ಭಾರತ ಸರ್ಕಾರದ, ಶಿಕ್ಷಣ ಸಚಿವಾಲಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪತ್ರದಲ್ಲಿ ಸೂಚಿಸಿರುವಂತೆ ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳು ಮತ್ತು ತತ್ವಗಳ ಅರಿವನ್ನು ಮೂಡಿಸುವಂತಹ Know Your Constitution ಕಾರ್ಯಕ್ರಮವನ್ನು ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಆಯೋಜಿಸಲು ಸೂಚನೆ ನೀಡಲಾಗಿದೆ.
ಆದ್ದರಿಂದ ದಿನಾಂಕ:26.11.2022 “ಸಂವಿಧಾನ ದಿನಾಚರಣೆ” ಅಂಗವಾಗಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಈ ಕೆಳಕಂಡ ಚಟುವಟಿಕೆಗಳನ್ನು ಮುಖ್ಯಸ್ಥರು ಹಮ್ಮಿಕೊಳ್ಳಲು ಕ್ರಮವಹಿಸಲು ಸೂಚಿಸಿದೆ. ಎಲ್ಲಾ ಶಾಲೆಗಳಲ್ಲಿ ದಿನಾಂಕ:26.11.2022ರಂದು ಬೆಳಿಗ್ಗೆ 11:00 ಗಂಟೆಗೆ ಏಕಕಾಲಕ್ಕೆ ಸಂವಿಧಾನದ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು, ಶಾಲಾ ಆವರಣದಲ್ಲಿನ ಪ್ರಮುಖ ಸ್ಥಳದಲ್ಲಿ ಭಾರತ ಸಂವಿಧಾನದ ಪೀಠಿಕೆ ಮತ್ತು ಮೂಲಭೂತ ಕರ್ತವ್ಯಗಳು ಮತ್ತು ಶಾಲೆಗಳಲ್ಲಿ ಸಂವಿಧಾನದ ವಿವಿಧ ಅಂಶಗಳ ಕುರಿತು ಚರ್ಚಾ ಸ್ಪರ್ಧೆ, ರಸಪ್ರಶ್ನೆಗಳು / ಪ್ರಬಂಧ ಸ್ಪರ್ಧೆಗಳು ಇತ್ಯಾದಿ ಕಾರ್ಯಕ್ರಮವನ್ನು ದಿನಾಂಕ:26.11.2022ರ ಪೂರ್ವದಲ್ಲಿ ಹಮ್ಮಿಕೊಳ್ಳುವಂತೆ ಆದೇಶ ಹೊರಡಿಸಲಾಗಿದೆ.
BIGG NEWS : ವಾರದಲ್ಲೇ ಆಸ್ತಿ ಖಾತೆ ; ಬೆಳಗಾವಿ ಅಧಿವೇಶನದಲ್ಲಿ ‘ಭೂ ಪರಿವರ್ತನೆ ವಿಧೇಯಕ’ ಮಂಡನೆ
ಮನೆಯ ಈ ದಿಕ್ಕಿನಲ್ಲಿ ಪಂಚಮುಖಿ ಆಂಜನೇಯ ದೇವರ ಫೋಟೋ ಇಟ್ಟುಕೊಂಡರೆ ನಿಮ್ಮ ಕಾರ್ಯ ಬೇಗ ಈಡೇರುತ್ತದೆ