ದಾವಣಗೆರೆ : ಬೆಣ್ಣೆ ನಗರಿ ದಾವಣಗೆರೆ ಜಿಲ್ಲೆಯ ಜಗಳೂರು ಹಾಗೂ ಹರಿಹರದಲ್ಲಿ ಇಂದು ಬಿಜೆಪಿ ಸಂಕಲ್ಪ ಯಾತ್ರೆ ಕೈಗೊಂಡಿದೆ.
ಇಂದು ಬೆಳಗ್ಗೆ 11:15 ಕ್ಕೆ ಜಗಳೂರಿನಲ್ಲಿ ಜನ ಸಂಕಲ್ಪ ಕಾರ್ಯಕ್ರಮ ನಡೆಯಲಿದ್ದು, ಮಧ್ಯಾಹ್ನ 2:30 ಕ್ಕೆ ಹರಿಹರದಲ್ಲಿ ಸಂಕಲ್ಪ ಯಾತ್ರೆ ನಡೆಯಲಿದೆ.
ಯಾತ್ರೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಭಾಗಿಯಾಗಲಿದ್ದಾರೆ.
ಜಗಳೂರಿನ ಬಯಲು ರಂಗ ಮಂದಿರದಲ್ಲಿ ಜನ ಸಂಕಲ್ಪ ಯಾತ್ರೆ ನಡೆಯಲಿದ್ದು, ಕಾರ್ಯಕ್ರಮಕ್ಕೆ 35 ಸಾವಿರ ಜನ ಸೇರುವ ನಿರೀಕ್ಷೆಯಿದೆ. ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ಯಡಿಯೂರಪ್ಪ, ಜಿ ಸಿದ್ದೇಶ್ವರ, ಗೋವಿಂದ ಕಾರಜೋಳ, ಶ್ರೀರಾಮುಲು ಸೇರಿದಂತೆ ಮತ್ತಿತರ ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ.
ಹೆಲಿಕಾಪ್ಟರ್ ಮೂಲಕ ಇಂದು 11:15 ಕ್ಕೆ ಸಿಎಂ ಬೊಮ್ಮಾಯಿ ಜಗಳೂರಿಗೆ ಆಗಮಿಸಲಿದ್ದು, ನಂತರ ಸಂಕಪ್ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ನಂತರ ಜಗಳೂರಿನಿಂದ ದಾವಣಗೆರೆ ಜಿಎಂಐಟಿ ಹೆಲಿಪ್ಯಾಡ್ ಗೆ ತೆರಳಿ ರಸ್ತೆ ಮೂಲಕ 2.25 ಕ್ಕೆ ಹರಿಹರಕ್ಕೆ ತೆರಳಲಿದ್ದಾರೆ. ನವೆಂಬರ್ 25 ರಂದು ಶಿವಮೊಗ್ಗದಲ್ಲಿ ಹಾಗೂ ನ.27 ರಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದಲ್ಲಿ ಜನಸಂಕಲ್ಪ ಯಾತ್ರೆ ನಡೆಯಲಿದೆ.
BREAKING NEWS : ಬೆಂಗಳೂರಿನ ರೌಡಿಶೀಟರ್ ಗಳಿಗೆ ‘ಸಿಸಿಬಿ’ ಶಾಕ್ : ತಡರಾತ್ರಿ ಮನೆಗಳ ಮೇಲೆ ದಾಳಿ, 26 ಮಂದಿ ವಶಕ್ಕೆ
BIGG NEWS : ಸಚಿವ ಬಿ.ಸಿ ಪಾಟೀಲ್ ಆಸ್ಪತ್ರೆಗೆ ದಾಖಲು : ಮಂಡಿ ನೋವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ