ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ತನಿಖೆ ಚುರುಕಾಗಿದ್ದು, ಇದರ ನಡುವೆ ಡಿಜಿ –ಐಜಿಪಿ ಪ್ರವೀಣ್ ಸೂದ್ ಮಂಗಳೂರಿಗೆ ಭೇಟಿ ನೀಡಿದ್ದಾರೆ.
ಪಶ್ಚಿಮ ವಲಯ ಐಜಿಪಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದು, ಸ್ಪೋಟ ಪ್ರಕರಣದ ತನಿಖೆ ಕುರಿತು ಮಾಹಿತಿ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಇದರ ನಡುವೆ ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಶಾರೀಖ್ ಗೆ ಚಿಕಿತ್ಸೆ ಮುಂದುವರೆದಿದ್ದು, ಆತನ ಆರೋಗ್ಯ ಸುಧಾರಿಸಿದ ಬಳಿಕ ಪೊಲೀಸರು ವಶಕ್ಕೆ ಪಡೆದು ಮತ್ತಷ್ಟು ವಿಚಾರಣೆ ನಡೆಸಲಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.