ದಾವಣಗೆರೆ: ವಿಧಾನಸಭಾ ಚುನಾವಣೆಗೆ ಇನ್ನೂ ಸಮಯ ಇರುವಾಗಲೇ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಭರದಿಂದ ಸಾಗಿದೆ.
BIGG NEWS: ಕರಾವಳಿಯಲ್ಲಿ ಗುಪ್ತವಾಗಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿವೆ: ರಘುಪತಿ ಭಟ್ ಗಂಭೀರ ಆರೋಪ
ದಾವಣಗೆರೆ ದಕ್ಷಿಣ ಮತಕ್ಷೇತ್ರದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮತ್ತೆ ಸ್ಪರ್ಧಿಸಲು ಉತ್ಸಾಹದಿಂದ ಅರ್ಜಿ ಸಲ್ಲಿಸಿದ್ದಾರೆ.
ಆದ್ರೆ, ದಾವಣಗೆರೆ ಉತ್ತರ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಇಲ್ಲಿಯತನಕ ಟಿಕೆಟ್ಗಾಗಿ ಅರ್ಜಿ ಸಲ್ಲಿಕೆ ಮಾಡಿಲ್ಲ ಎಂಬ ಸುದ್ದಿ ಕೈ ಪಾಳಯದಲ್ಲಿ ಕೇಳಿ ಬಂದಿದೆ.ಇದಕ್ಕೆ ಪ್ರತಿಕ್ರಿಯಿಸಿದ ಹಿರಿಯ ಶಾಮನೂರು ಶಿವಶಂಕರಪ್ಪ, ಕಾಂಗ್ರೆಸ್ನಲ್ಲಿ ಕೇಳಿದ್ರೆ ನಮ್ಮ ಮನೆಗೆ ನಾಲ್ಕು ಟಿಕೆಟ್ ಬೇಕಾದ್ರೂ ಕೊಡುತ್ತಾರೆ. ನಮ್ಮ ಪುತ್ರ ಎಸ್ ಎಸ್ ಮಲ್ಲಿಕಾರ್ಜುನ ಸ್ಪರ್ಧಿಸುವ ಬಗ್ಗೆ ಅವರನ್ನೇ ಕೇಳಿ ಎಂದರು.