ನವದೆಹಲಿ: ಒಂದೆಡೆ ಬೆಂಗಳೂರಿನ ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಸಂಬಂಧ ಚುನಾವಣಾ ಆಯೋಗದಿಂದ ತನಿಖೆ ಚುರುಕುಗೊಂಡಿದೆ. ಮತ್ತೊಂದೆಡೆ ರಾಜ್ಯ ಚುನಾವಣಾ ಆಯೋಗದ ನಂತ್ರ, ಇಂದು ಕಾಂಗ್ರೆಸ್ ಪಕ್ಷದಿಂದ ( Congress Party ) ಅಕ್ರಮ ಸಂಬಂಧ ತನಿಖೆ ನಡೆಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ( Central Election Commission -CEC ) ದೂರು ನೀಡಿದೆ.
ಶಿವಮೊಗ್ಗ: ನ.24ರ ನಾಳೆ ‘ಸೊರಬ’ ತಾಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಇಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ನೇತೃತ್ವದಲ್ಲಿ ಕೇಂದ್ರ ಚುನಾವಣಾ ಆಯೋಗದ ಕಚೇರಿಗೆ, ಒಂದೇ ಕಾರಿನಲ್ಲಿ ಕಾಂಗ್ರೆಸ್ ನಾಯಕರು ತೆರಳಿ ದೂರು ನೀಡಿದ್ದಾರೆ.
ಕೇಂದ್ರ ಚುನಾವಣಾ ಆಯೋಗದ ಕಚೇರಿಗೆ ಸ್ವಂತ ಕಾರು ಚಲಾಯಿಸಿಕೊಂಡು ರಣದೀಪ್ ಸುರ್ಜೇವಾಲ ತೆರಳಿದ್ದು ಗಮನ ಸೆಳೆಯಿತು. ಇವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಕ್ತಾರ ಪ್ರಿಯಾಂಕ್ ಖರ್ಗೆ, ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ ಪಾಟೀಲ್ ತೆರಳಿ ದೂರು ಸಲ್ಲಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಪಕ್ಷ ಸಲ್ಲಿಸಿರುವಂತ ದೂರಿನಲ್ಲಿ ಬೆಂಗಳೂರಿನ ಮತದಾರರ ಪಟ್ಟಿಯ ಪರಿಷ್ಕರಣೆ ಅಕ್ರಮದಲ್ಲಿ ರಾಜ್ಯ ಸರ್ಕಾರವೇ ನೇರವಾಗಿ ಭಾಗಿಯಾಗಿದೆ. ಅಕ್ರಮ ಎಸಗಿದಂತ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಅಕ್ರಮಕ್ಕೆ ಪ್ರಮುಖ ಕಾರಣವಾಗಿರುವಂತ ಚಿಲುಮೆ ಸಂಸ್ಥೆಯ ವಿರುದ್ಧವೂ ದೂರು ನೀಡಲಾಗಿದೆ.