ಬೆಂಗಳೂರು: ಕೆಲ ದಿನಗಳ ಹಿಂದೆ ನಂದಿನ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 3 ರೂ ಹೆಚ್ಚಳ ಮಾಡುತ್ತಿರೋದಾಗಿ ಕೆ ಎಂಎಫ್ ನಿಂದ ಘೋಷಣೆ ಮಾಡಲಾಗಿತ್ತು. ಆದ್ರೇ ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಅವರು ಬ್ರೇಕ್ ಹಾಕಿದ್ದರು. ಈ ಬಳಿಕ ಸಭೆ ನಡೆಸಿ ಯಾವುದೇ ತೊಂದರೆಯಾಗದಂತೆ ದರ ಹೆಚ್ಚಳಕ್ಕೆ ಸಭೆಯಲ್ಲಿ ಸಲಹೆ ಮಾಡಿದ್ದರು. ಸಿಎಂ ಸಲಹೆಯಂತೆ ಇಂದು ನಂದಿನ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಾಡಲಾಗಿದೆ.
BREAKING NEWS: ಬೆಂಗಳೂರಿನ ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ: ಕಾಂಗ್ರೆಸ್ ನಿಂದ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು
ಈ ಕುರಿತಂತೆ ಇಂದಿನ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ( KMF President Balachandra Jarkiholi ) ನೇತೃತ್ವದಲ್ಲಿ ನಂದಿನ ಉತ್ಪನ್ನಗಳ ( Nandini Product ) ದರ ಹೆಚ್ಚಳ ಸಂಬಂಧ ಮಹತ್ವದ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಹಲವು ಅಧಿಕಾರಿಗಳು, ನಾಯಕರು ಭಾಗಿಯಾಗಿದ್ದರು.
ಶಿವಮೊಗ್ಗ: ನ.24ರ ನಾಳೆ ‘ಸೊರಬ’ ತಾಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೆ ಎಂ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನಂದಿನಿ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಾಡಲಾಗಿದೆ. ದರ ಹೆಚ್ಚಳದ ಸೌಲಭ್ಯವನ್ನು ರೈತರು ಪಡೆಯಲಿದ್ದಾರೆ ಎಂಬುದಾಗಿ ಹೇಳಿದ್ದಾರೆ. ಈ ಮೂಲಕ ಕೊನೆಗೂ ಅಳೆದು ತೂಗಿ ನಂದಿನ ಹಾಲು, ಮೊಸರಿನ ದರವನ್ನು ಹೆಚ್ಚಳ ಮಾಡಲಾಗಿದೆ.
ವರದಿ : ವಸಂತ ಬಿ ಈಶ್ವರಗೆರೆ