ಬೆಂಗಳೂರು : ರಾಜ್ಯದ ಜನತೆಗೆ ಮತ್ತೆ ಮಳೆಯ ಶಾಕ್ ಎದುರಾಗಿದ್ದು, ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನ.27 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ಮಾತ್ರವಲ್ಲದೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ರೀತಿ ಕರ್ನಾಟಕದ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಮಂಡ್ಯ, ರಾಮನಗರ, ಮೈಸೂರು, ತುಮಕೂರು ಹಾಗೂ ಉತ್ತರ ಕರ್ನಾಟಕದ ವಿಜಯಪುರ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುರುವಾರವೂ ತುಂತುರು ಮಳೆಯಾಗುವ ಸಾಧ್ಯತೆಯಿದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಹಾಗೂ ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಕೊಡಗು ಪ್ರದೇಶಗಳಲ್ಲೂ ಜೋರು ಮಳೆಯಾಗಲಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ 2 ದಿನಗಳ ಕಾಲ ತುಂತುರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ಬೆಂಗಳೂರಿನಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಮಾತ್ರವಲ್ಲದೇ ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ. ಮಂಡ್ಯ, ರಾಮನಗರ, ಮೈಸೂರು. ತುಮಕೂರು , ವಿಜಯಪುರ ಹಾಗೂ ಹಾವೇರಿ ಸೇರಿ ಇತರೆ ಜಿಲ್ಲೆಗಳಲ್ಲಿ ನ.27 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : ಮಂಗಳೂರು ಸ್ಪೋಟಕ್ಕೆ ದುಬೈನಲ್ಲಿ ಸ್ಕೆಚ್ : ಸ್ಪೋಟಕ ಮಾಹಿತಿ ಬಯಲು