ಬೆಂಗಳೂರು: ಕೆಲ ದಿನಗಳ ಹಿಂದೆ ನಂದಿನ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 3 ರೂ ಹೆಚ್ಚಳ ಮಾಡುತ್ತಿರೋದಾಗಿ ಕೆ ಎಂಎಫ್ ನಿಂದ ಘೋಷಣೆ ಮಾಡಲಾಗಿತ್ತು. ಆದ್ರೇ ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಅವರು ಬ್ರೇಕ್ ಹಾಕಿದ್ದರು. ಸಭೆ ನಡೆಸಿ ಯಾವುದೇ ತೊಂದರೆಯಾಗದಂತೆ ದರ ಹೆಚ್ಚಳಕ್ಕೆ ಸಭೆಯಲ್ಲಿ ಸಲಹೆ ಮಾಡಿದ್ದರು. ಸಿಎಂ ಸಲಹೆಯಂತೆ ನಿನ್ನೆ ನಂದಿನ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಾಡಲಾಗಿದೆ.
ಈ ಕುರಿತಂತೆ ನಿನ್ನೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ( KMF President Balachandra Jarkiholi ) ನೇತೃತ್ವದಲ್ಲಿ ನಂದಿನ ಉತ್ಪನ್ನಗಳ ( Nandini Product ) ದರ ಹೆಚ್ಚಳ ಸಂಬಂಧ ಮಹತ್ವದ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಹಲವು ಅಧಿಕಾರಿಗಳು, ನಾಯಕರು ಭಾಗಿಯಾಗಿದ್ದರು.
ಟೋನ್ಡ್ ಹಾಲಿನ ದರ 37 ರಿಂದ 39 ರುಪಾಯಿಗೆ ಹೆಚ್ಚಳ ಮಾಡಲಾಗಿದೆ. ಇನ್ನು ಸ್ಪೆಷಲ್ ಹಾಲಿನ ದರ 43 ರಿಂದ 45 ರೂಪಾಯಿಗೆ, ಸಮೃದ್ಧಿ ಹಾಲಿನ ದರ 48 ರಿಂದ 50 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.
ಹೋಮೋಜಿನೈಸ್ಡ್ ಹಾಲು 38 ರೂ. ರಿಂದ 40 ರೂ.ಗೆ ಏರಿಕೆ. ಹೊಮೊಜಿನೈಸ್ಡ್ ಹಸುವಿನ ಹಾಲು 42 ರೂ. ರಿಂದ 44 ರೂ.ಗೆ ಏರಿಕೆ. ಶುಭಂ ಹಾಲು 43 ರೂ. ರಿಂದ 45 ರೂ.ಗೆ ಏರಿಕೆ. ಹೊಮೊಜಿನೈಸ್ಡ್ ಸ್ಟ್ಯಾಂಡಡೈಸ್ಡರ್ ಹಾಲು 44 ರೂ. ರಿಂದ 46 ರೂ.ಗೆ ಏರಿಕೆ. ಸಂತೃಪ್ತಿ ಹಾಲು 50 ರೂ. ರಿಂದ 52 ರೂ.ಗೆ ಏರಿಕೆ. ಡಬಲ್ ಟೋನ್ಡ್ ಹಾಲು 36 ರೂ. ರಿಂದ 38 ರೂ.ಗೆ ಏರಿಕೆಯಾಗಿದೆ. ಮೊಸರಿನ ದರವನ್ನು ಲೀಟರ್ ಗೆ 45 ರಿಂದ 47 ರೂಪಾಯಿಗೆ ಏರಿಕೆ ಮಾಡಲಾಗಿದೆ.
BIG NEWS: ಕೋವಿಡ್ ಸಾಂಕ್ರಾಮಿಕದ ಬೆನ್ನಲ್ಲೇ, ʻದಡಾರʼ ಅಪಾಯ ಹೆಚ್ಚಳ ಸಾಧ್ಯತೆ: WHOನಿಂದ ಎಚ್ಚರಿಕೆ