ತಿರುವನಂತಪುರಂ: ಕಾಂತಾರ ಚಿತ್ರದ ʼವರಾಹರೂಪಂʼ ಹಾಡಿನ ಬಳಕೆಗೆ ನೀಡಲಾಗಿದ್ದ ಮಧ್ಯಂತರ ತಡೆಯನ್ನು ತೆರವುಗೊಳಿಸಬೇಕೆಂದು ಕೋರಿ ಹೊಂಬಾಳೆ ಫಿಲ್ಮ್ಸ್ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ವಜಾಗೊಳಿಸಿದೆ.
BIGG NEWS : ಬೆಂಗಳೂರಿನ ‘ದಕ್ಷಿಣ ವಲಯದ ರಸ್ತೆಗಳು ಗುಂಡಿ ಮುಕ್ತ’ : ಬಿಬಿಎಂಪಿ ಘೋಷಣೆ | Roads are pothole free
ನ್ಯಾಯಮೂರ್ತಿ ಸಿಎಸ್ ಡಯಾಸ್ ಅವರ ಏಕಸದಸ್ಯ ಪೀಠವು, ಅರ್ಜಿದಾರರು ಭಾರತದ ಸಂವಿಧಾನದ 227ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ. ಸಿವಿಲ್ ಪ್ರಕ್ರಿಯಾ ಸಂಹಿತೆಯಲ್ಲಿ ಸೂಚಿಸಲಾದ ಕಾರ್ಯವಿಧಾನವನ್ನು ಸಂಪೂರ್ಣವಾಗಿ ಬೈಪಾಸ್ ಮಾಡಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.
BIGG NEWS : ಬೆಂಗಳೂರಿನ ‘ದಕ್ಷಿಣ ವಲಯದ ರಸ್ತೆಗಳು ಗುಂಡಿ ಮುಕ್ತ’ : ಬಿಬಿಎಂಪಿ ಘೋಷಣೆ | Roads are pothole free
ಕೆಳ ನ್ಯಾಯಾಲಯಗಳು ಹೊರಡಿಸಿದ ಪ್ರತಿಯೊಂದು ಮಧ್ಯಂತರ ಆದೇಶಗಳಿಗೆ ನಾವು ಆದೇಶವನ್ನು ನೀಡಲು ಸಾಧ್ಯವಿಲ್ಲ. ಒಂದು ವೇಳೆ ಆದೇಶ ನೀಡಿದರೆ ಮೂಲ ನ್ಯಾಯವ್ಯಾಪ್ತಿಯ ನ್ಯಾಯಾಲಯಗಳು ಮತ್ತು ಮೇಲ್ಮನವಿ ನ್ಯಾಯಾಲಯಗಳು ನಿಷ್ಕ್ರಿಯವಾಗುತ್ತವೆ. ಈ ನ್ಯಾಯಾಲಯವು ಇಂತಹ ಕೇಸ್ಗಳಿಂದ ತುಂಬಿ ತುಳುಕುತ್ತದೆ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದೆ.