ತುಮಕೂರು : ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದ ಮಧುಗಿರಿ JDS ಶಾಸಕ ವೀರಭದ್ರಯ್ಯ ಯೂ ಟರ್ನ್ ಹೊಡೆದಿದ್ದಾರೆ.
ಈ ಬಾರಿ ನಾನೇ ಮಧುಗಿರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂದು ಹೇಳುವ ಮೂಲಕ ವೀರಭದ್ರಯ್ಯ ಯೂ ಟರ್ನ್ ಹೊಡೆದಿದ್ದಾರೆ. ಈ ಹಿಂದೆ ಅವರು ಚುನಾವಣೆಗೆ ಸ್ಪರ್ಧಿಸೋಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ ಈ ಬೆನ್ನಲ್ಲೇ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಕಾರಣಾಂತರಗಳಿಂದ ನಾನು ಚುನಾವಣೆಯಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದೆನು, ನನ್ನ ಕುಟುಂಬದ ಸದಸ್ಯರಿಗೈ ಸ್ಪರ್ಧೆ ಮಾಡುವುದು ಬೇಡ ಎಂದು ಹೇಳಿದ್ದೆ, ಆದರೆ ಜೆಡಿಎಸ್ ಕಾರ್ಯಕರ್ತರು ಒತ್ತಾಯ ಮಾಡಿ, ಬೆಂಗಳೂರಿನ ನನ್ನ ಮನೆ ಮುಂದೆ ಪ್ರತಿಭಟನೆ ನಡೆಸಿದ್ದರು, ಆದ್ದರಿಂದ ನಾನು ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ ಎಂದರು.
BIG NEWS: ʻಡಿಜಿಟಲ್ ಮಾಧ್ಯಮʼ ನಿಯಂತ್ರಣಕ್ಕೆ ಶೀಘ್ರದಲ್ಲೇ ಕಾನೂನು ಜಾರಿ: ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾಹಿತಿ