ಬೆಂಗಳೂರು: ಭಾರೀ ಟ್ರಾಫಿಕ್ ಜಾಮ್ ಉಂಟಾಗುವ ಸಿಲಿಕಾನ್ ಸಿಟಿಯ ಪ್ರಮುಖ ಪ್ರದೇಶಗಳಲ್ಲಿ ಏರ್ಪೋರ್ಟ್ ರಸ್ತೆಯು ಒಂದು. ಇಲ್ಲಿ ಒಮ್ಮೆ ಟ್ರಾಫಿಕ್ ಜಾಮ್ ಉಂಟಾದರೇ ಕನಿಷ್ಠ 20 ರಿಂದ 25 ನಿಮಿಷಗಳಾದರೂ ಬೇಕಾಗುತ್ತದೆ.
BIGG NEWS: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ನ್ಯೂಸ್: ಒಂದೇ ಟಿಕೆಟ್ನಲ್ಲಿ ಗುಂಪು ಪ್ರಯಾಣಕ್ಕೆ ಅವಕಾಶ
ಹೀಗಾಗಿ ಬೆಂಗಳೂರು ಸಂಚಾರ ಪೊಲೀಸರು ಹೊಸ ಯೋಜನೆ ಮಾಡಿದ್ದು, ಪ್ರತಿ ದಿನ ಬೆಳಗ್ಗೆ 8.30 ರಿಂದ 10.30ರವರೆಗೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿಷೇಧಿಸಿದ್ದರು. ಈ ಕ್ರಮವನ್ನು ಪ್ರಾಯೋಗಿಕವಾಗಿ ಒಂದು ತಿಂಗಳ ಮಟ್ಟಿಗೆ ಆದೇಶಿಸಲಾಗಿದೆ.ಈ ಕ್ರಮದಿಂದ ಹೆಬ್ಬಾಳ ಮೇಲ್ಸೇತುವೆಯಲ್ಲಿ ಸಂಚಾರ ದಟ್ಟಣೆ ಗಮನಾರ್ಹವಾಗಿ ನಿಯಂತ್ರಣವಾಗಿದೆ ಎಂದು ಬೆಂಗಳೂರು ಟ್ರಾಫಿಕ್ ವಿಶೇಷ ಪೊಲೀಸ್ ಆಯುಕ್ತ ಡಾ.ಎಂ.ಎ.ಸಲೀಂ ಮಾಹಿತಿ ಹಂಚಿಕೊಂಡಿದ್ದಾರೆ.