ಮಂಗಳೂರು : ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಶಾರೀಕ್ ಬೆನ್ನಿಗೆ ನಿಂತಿದ್ದು, ಇನ್ನೊಂದು ದಾಳಿ ಮಾಡುವ ಬೆದರಿಕೆ ಒಡ್ಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಲೋಕ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ, ಈ ವೇಳೆ ತನಿಖೆಯ ದಿಕ್ಕು ತಪ್ಪಿಸಲು ಇಂಥ ಹೇಳಿಕೆ ಬಿಡುಗಡೆ ಮಾಡಿರಬಹುದು. ಇದಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ಮತ್ತೊಂದು ತನಿಖೆ ನಡೆಸುತ್ತೇವೆ ಎಂದಿದ್ದಾರೆ.ಈ ಪೋಸ್ಟ್ ಎಲ್ಲಿಂದ ಬಂತು, ಇದರ ಹಿಂದೆ ಯಾರೆಲ್ಲಾ ಇದ್ದಾರೆ ಎನ್ನುವ ಬಗ್ಗೆಯೂ ತನಿಖೆ ಮಾಡುತ್ತೇವೆ’ ಎಂದು ಅವರು ತಿಳಿಸಿದರು.
ಶಂಕಿತ ಉಗ್ರ ಶಾರೀಕ್ ಬೆಂಬಲಿಸಿ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ (Islamic Resistence Concil – IRC) ಹೇಳಿಕೆ ಬಿಡುಗಡೆ ಮಾಡಿದೆ.ಶಂಕಿತ ಉಗ್ರ ಶಾರೀಕ್ ನಮ್ಮ ಸಹೋದರ. ಮಂಗಳೂರಿನ ಕದ್ರಿ ದೇವಾಲಯದ ಮೇಲೆ ದಾಳಿಗೆ ಯತ್ನಿಸಲಾಗಿತ್ತು. ಮಂಗಳೂರು ಕೇಸರಿ ಭಯೋತ್ಪಾದಕರ ಭದ್ರಕೋಟೆಯಾಗಿದೆ. ಈ ಕಾರ್ಯಾಚರಣೆಯ ನಮ್ಮ ಉದ್ದೇಶ ಈಡೇರದಿದ್ದರೂ ರಾಜ್ಯ, ಕೇಂದ್ರ ಗುಪ್ತಚರ ಸಂಸ್ಥೆಗಳ ಕಣ್ತಪ್ಪಿಸಿ ದಾಳಿಗೆ ಸಿದ್ಧತೆ ಮಾಡಿಕೊಳ್ಳುತ್ತೇವೆ’ ಎಂದು ಉಗ್ರರು ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯ , ಮಂಗಳಾದೇವಿ ದೇವಾಲಯ, ಮಂಜುನಾಥ ಸ್ವಾಮಿ ದೇವಾಲಯಕ್ಕೂ ಉಗ್ರರು ಸ್ಕೆಚ್ ಹಾಕಿದ್ದರು ಎಂಬ ಮಾಹಿತಿ ಬಯಲಾಗಿದೆ.
ನಿಮ್ಮ ಸಂತೋಷ ಅಲ್ಪಕಾಲಿಕ, ರಾಜ್ಯದಲ್ಲಿ ಹತ್ಯೆ, ದಬ್ಬಾಳಿಕೆಯ ಕಾನೂನು ನಡೆಯುತ್ತಿದೆ ಎಂದು ಡಾರ್ಕ್ ವೆಬ್ ಮೂಲಕ ಉಗ್ರರು ಎಚ್ಚರಿಕೆ ಸಂದೇಶ ನೀಡಿದ್ದಾರೆ. ಸ್ಪೋಟದ ಹೊಣೆಯನ್ನು ಇಸ್ಲಾಮಿಕ್ ರೆಸಿಸ್ಟೆನ್ಸ್ ಹೊತ್ತಿಕೊಂಡಿದ್ದು, ಉಗ್ರ ಶಾರೀಖ್ ದುಷ್ಕ್ರೃತ್ಯವನ್ನು ಸಮರ್ಥಿಸಿಕೊಂಡಿದೆ.
BIGG NEWS: ಹೆಬ್ಬಾಳ ಫ್ಲೈಓವರ್ ಮೇಲೆ ಸರಕು ವಾಹನಗಳ ನಿರ್ಬಂಧದಿಂದ ಟ್ರಾಫಿಕ್ ನಿಯಂತ್ರಣ