ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ( Government First Grade College ) ಬೋಧಕರ ವರ್ಗಾವಣೆಯನ್ನು ( Transfer of Faculty ) ಗಣಕೀಕೃತ ಕೌನ್ಸಿಲಿಂಗ್ ಮೂಲಕ ನಡೆಸೋದಕ್ಕೆ ಅನುಮತಿ ನೀಡಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೋಧಕರಿಗೆ ಗುಡ್ ನ್ಯೂಸ್ ನೀಡಿದೆ.
ಹೋಟೆಲ್ ಆಹಾರ ಪ್ರಿಯರಿಗೆ ಗುಡ್ ನ್ಯೂಸ್: ಹಾಲು, ಮೊಸರಿನ ದರ ಏರಿಕೆಯಾದ್ರೂ, ಉಪಹಾರಗಳ ದರ ಹೆಚ್ಚಳವಿಲ್ಲ
ಈ ಕುರಿತಂತೆ ಕಾಲೇಜು ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಪ್ರತಿ ವರ್ಷ ಕೌನ್ಸೆಲಿಂಗ್ ಮೂಲಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿರುತ್ತದೆ. ವಿವಿಧ ಕಾರಣಗಳಿಂದಾಗಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಬೋಧಕರ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳದಿರುವುದರಿಂದ ಹಲವಾರು ಮನವಿಗಳು ಸರ್ಕಾರಕ್ಕೆ ಸ್ವೀಕೃತವಾಗಿದೆ ಎಂದು ಹೇಳಿದೆ.
ರಾಜ್ಯ ಸರ್ಕಾರಕ್ಕೆ ವರ್ಗಾವಣೆಗಾಗಿ ಸಲ್ಲಿಕೆಯಾದಂತ ಮನವಿಗಳ ಹಿನ್ನಲೆಯಲ್ಲಿ, ಆಯುಕ್ತಾಲಯದ ಪ್ರಸ್ತಾವನೆಯಂತೆ ನವೆಂಬರ್-ಡಿಸೆಂಬರ್ ತಿಂಗಳಿನಲ್ಲಿ ಪಾರದರ್ಶಕವಾಗಿ ನಿಯಮಾನುಸಾರ ಗಣಕೀಕೃತ ಕೌನ್ಸಿಲಿಂಗ್ ಆಧಾರದ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಸರ್ಕಾರ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ
BIG NEWS : ಉಡುಪಿಯಲ್ಲಿ ಹೃದಯ ವಿದ್ರಾವಕ ಘಟನೆ : ಮದುವೆಗೂ ಮುನ್ನ ರೋಸ್ ಸಮಾರಂಭದಲ್ಲಿ, ಕುಸಿದು ಬಿದ್ದು ಯುವತಿ ಸಾವು