ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಗೆ ( Minister Dr K Sudhakar ) ಸಂಕಷ್ಟ ಎದುರಾಗಿದೆ. ಮಾನನಷ್ಟ ಆರೋಪ ಕೇಸ್ ನಲ್ಲಿ, ಕ್ರಿಮಿನಲ್ ಪ್ರಕರಣ ( Criminal Case ) ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಈ ಮೂಲಕ ಸಚಿವರಿಗೆ ಬಿಗ್ ಶಾಕ್ ನೀಡಲಾಗಿದೆ.
BREAKING NEWS: ‘ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೋಧಕ ಸಿಬ್ಬಂದಿ’ಗಳ ವರ್ಗಾವಣೆಗೆ ‘ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್’
ಸಚಿವ ಡಾ.ಕೆ ಸುಧಾಕರ್ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆಂಜನೇಯ ರೆಡ್ಡಿ ಎಂಬುವರು ಮಾನ ಹಾನಿಕರ ಹೇಳಿಕೆ ಕೇಸ್ ದಾಖಲಿಸಿದ್ದರು. ಇದಷ್ಟೇ ಅಲ್ಲದೇ ಈ ಸಂಬಂಧದ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯಕ್ಕೆ ಒದಗಿಸಿದ್ದರು. ಇಂದು ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ ನ್ಯಾಯಾದೀಶರಾದಂತ ಜೆ ಪ್ರೀತ್ ಅವರು, ಸಚಿವ ಡಾ.ಕೆ ಸುಧಾಕರ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣವನ್ನು ದಾಖಲಿಸುವಂತೆ ನಿರ್ದೇಶಿಸಿದೆ.
ಪ್ಯಾರಾ ಮೆಡಿಕಲ್, ನಾನ್ ಪ್ಯಾರಾ ಮೆಡಿಕಲ್ ಸರ್ಟಿಫಿಕೇಟ್ ಕೋರ್ಸ್ ಗಾಗಿ ಅರ್ಜಿ ಆಹ್ವಾನ
ಅಂದಹಾಗೇ ಸುಧಾಕರ್ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರನ್ನಾಗಿ ಮಾಡಿದಂತ ಸಂದರ್ಭದಲ್ಲಿ, ಇದನ್ನು ಆಂಜನೇಯ ರೆಡ್ಡಿ ಪ್ರಶ್ನಿಸಿದ್ದರು. ಈ ಬಗ್ಗೆ ಹೈಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದರು. ಈ ಬಗ್ಗೆ ಅಂದು ಸುಧಾಕರ್ ಆಂಜನೇಯ ರೆಡ್ಡಿ ವಿರುದ್ಧ ಅವಮಾನಕರ ಹೇಳಿಕೆಯನ್ನು ನೀಡಿದ್ದರು. ಇದೇ ಪ್ರಕರಣದಲ್ಲಿ ಇಂದು ನ್ಯಾಯಾಲಯವು ಮಾನನಷ್ಟ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಆದೇಶಿಸಿದೆ.
ಶಿವಮೊಗ್ಗ: ನ.26, 27ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut