ಬೆಂಗಳೂರು: ನಕಲಿ ಬಿಎಲ್ಒ ಗುರುತಿನ ಚೀಟಿ ವಿತರಣೆ ಹೊಣೆಯನ್ನು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ( District Election Officer Tushar Girinath ) ಅವರೇ ಹೊರಬೇಕು. ಆದ್ದರಿಂದ ಕೇಂದ್ರ ಚುನಾವಣಾ ಆಯೋಗ ಅವರನ್ನು ಚುನಾವಣಾಧಿಕಾರಿ ಜವಾಬ್ದಾರಿಯಿಂದ ಬಿಡುಗಡೆ ಮಾಡಬೇಕು. ವಿಚಾರಣೆ ಬಾಕಿ ಇರುವ ವರೆಗೆ ಅವರನ್ನು ಅಮನತು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ( Congress Ramesh Babu ) ಆಗ್ರಹಿಸಿದ್ದಾರೆ.
ನಕಲಿ ಬಿಎಲ್ಒ ಗುರುತಿನ ಚೀಟಿ ವಿತರಣೆ ಹೊಣೆಯನ್ನು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರೇ ಹೊರಬೇಕು.
ಆದ್ದರಿಂದ ಕೇಂದ್ರ ಚುನಾವಣಾ ಆಯೋಗ ಅವರನ್ನು ಚುನಾವಣಾಧಿಕಾರಿ ಜವಾಬ್ದಾರಿಯಿಂದ ಬಿಡುಗಡೆ ಮಾಡಬೇಕು.
ವಿಚಾರಣೆ ಬಾಕಿ ಇರುವ ವರೆಗೆ ಅವರನ್ನು ಅಮನತು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು.
– @RameshBabuKPCC pic.twitter.com/1cxVQRQaPc— Karnataka Congress (@INCKarnataka) November 24, 2022
ಕೆಪಿಸಿಸಿ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಅದರಿಂದ ತಪ್ಪಿಸಿಕೊಳ್ಳಲು ಮೂವರು ಎಆರ್ಒಗಳನ್ನು ವಜಾ ಮಾಡಿ, ತನಿಖೆ ನಡೆಸುವುದಾಗಿ ಹೇಳಿದ್ದಾರೆ. ಇಲ್ಲಿ ನಿಜಕ್ಕೂ ವಜಾಗೊಳ್ಳಬೇಕಾಗಿರುವುದು ತುಷಾರ್ ಗಿರಿನಾಥ್ ಅವರು ಎಂದು ಹೇಳಿದ್ದಾರೆ.
ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ.
ಅದರಿಂದ ತಪ್ಪಿಸಿಕೊಳ್ಳಲು ಮೂವರು ಎಆರ್ಒಗಳನ್ನು ವಜಾ ಮಾಡಿ, ತನಿಖೆ ನಡೆಸುವುದಾಗಿ ಹೇಳಿದ್ದಾರೆ.
ಇಲ್ಲಿ ನಿಜಕ್ಕೂ ವಜಾಗೊಳ್ಳಬೇಕಾಗಿರುವುದು ತುಷಾರ್ ಗಿರಿನಾಥ್ ಅವರು!
– @RameshBabuKPCC pic.twitter.com/2RoKlAiCUT— Karnataka Congress (@INCKarnataka) November 24, 2022