ಬೆಂಗಳೂರು : ರಾಜ್ಯದಲ್ಲಿ ಅಸ್ಪೃಶ್ಯತೆ ನಿವಾರಣೆಗಾಗಿ ರೂಪಿಸಲಾಗಿರುವ ವಿನಯ ಸಾಮರಸ್ಯ ಯೋಜನೆಗೆ ಡಿಸೆಂಬರ್ ನಲ್ಲಿ ಚಾಲನೆ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
WATCH VIDEO: ಹೋರಾಡಲು ಸಾಧ್ಯವಾಗದ ಮುದಿ ಸಿಂಹದ ಮೇಲೆ ಎಮ್ಮೆಗಳ ಹಿಂಡು ದಾಳಿ… ಇಲ್ಲಿ ಕೊನೆಗೂ ಗೆದ್ದವರ್ಯಾರು ಗೊತ್ತಾ?
ಗುರುವಾರ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ವಿನಯ ಸಾಮರಸ್ಯ ಯೋಜನೆ ಚಾಲನೆ ಸಂಬಂಧ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದು, ಅಸ್ಪೃಶ್ಯತೆ ನಿವಾರಣೆಗಾಗಿ ಇಲಾಖೆಯಿಂದ ರೂಪಿಸಿರುವ ವಿನೂತನ ವಿನಯ ಸಾಮರಸ್ಯ ಯೋಜನೆಗೆ ವಿದ್ಯುಕ್ತವಾಗಿ ಚಾಲನೆ ನೀಡಬೇಕಿದ್ದು, ಡಿಸೆಂಬರ್ 2 ನೇ ವಾರದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲು ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
BIGG NEWS : ರಾಜ್ಯ ಸರ್ಕಾರಿ ಶಾಲಾ ಮಕ್ಕಳಿಗೆ ಶೀಘ್ರವೇ `ಡಿಜಿಟಲ್ ಹೆಲ್ತ್ ಕಾರ್ಡ್’ ವಿತರಣೆ
ಬೆಂಗಳೂರು ಅಥವಾ ಕೊಪ್ಪಳದಲ್ಲಿ ಸಮಾವೇಶ ಹಮ್ಮಿಕೊಳ್ಳುವ ಬಗ್ಗೆ ಸದ್ಯದಲ್ಲೇ ಸ್ಥಳ ಹಾಗೂ ದಿನಾಂಕ ಅಂತಿಮಗೊಳಿಸಲಾಗುವುದು. ಬೃಹತ್ ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.