ಬೆಂಗಳೂರು : ರಾಜ್ಯ ಸರ್ಕಾರ ರಾಜ್ಯದ ವಿವಿಧ ಸಮಾಜಗಳ ಮಠ, ದೇವಸ್ಥಾನ, ಸಂಘ-ಸಂಸ್ಥೆಗಳು ಮತ್ತು ಟ್ರಸ್ಟ್ ಗಳಿಗೆ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
BIGG NEWS : SDA ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಇಂದು 1,323 `SDA’ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ಒಟ್ಟು 55 ಮಠಗಳು, 81 ದೇಗುಲಗಳು, 25 ಸಂಘ-ಸಂಸ್ಥೆಗಳು ಮತ್ತು ಟ್ರಸ್ಟ್ ಗಳಿಗೆ ಸಮುದಾಯ ಚಟುವಟಿಕೆಗಳು, ಅಭಿವೃದ್ಧಿ, ಜೀರ್ಣೋದ್ಧಾರ ಹಾಗೂ ಇತರೆ ಕಾರ್ಯಗಳಿಗೆ ಒಟ್ಟು 23.95 ಕೋಟಿ ರೂ. ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಪೈಕಿ ವೀರಶೈವ ಲಿಂಗಾಯತ ಪಂಚಮಸಾಲಿ ಮಠಕ್ಕೂ ಅನುದಾನ ರಿಲೀಸ್ ಮಾಡಲಾಗಿದೆ. ಕೆಲ ತಿಂಗಳ ಹಿಂದೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಗ್ರಾಮದಲ್ಲಿ ಸ್ಥಾಪನೆಯಾಗಿದ್ದ 3 ನೇ ಪೀಠಕ್ಕೂ ಅನುದಾನ ಬಿಡುಗಡೆ ಮಾಡಲಾಗಿದೆ.
ವೀರಶೈವ ಲಿಂಗಾಯತ ಪಂಚಮಸಾಲ ಸ್ವಾಮೀಜಿಗಳ ಒಕ್ಕೂಟದ ಸದಸ್ಯರಾಗಿರುವ ಸ್ವಾಮೀಜಿಗಳ ಮಠಗಳಿಗೂ ತಲಾ 20 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ.
BIGG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : 2023ರಲ್ಲಿ ಸಿಗಲಿವೆ 19 ಸರ್ಕಾರಿ ರಜೆ ದಿನ