ಮಂಗಳೂರು : ಮಂಗಳೂರು ಬಾಂಬ್ ಸ್ಪೋಟದಲ್ಲಿ ಗಾಯಗೊಂಡ ಅಟೋ ಚಾಲಕನ ಕುಟುಂಬಕ್ಕೆ ಸರ್ಕಾರದ ಕಡೆಯಿಂದ ಸೂಕ್ತ ಪರಿಹಾರ ಕೊಡಲಾಗುವುದು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ವಿಚಾರಿಸಿ ಸಾಂತ್ವನ ಹೇಳಿದರು.
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಆಟೋ ಚಾಲಕರಾದ ಪುರುಷೋತ್ತಮ ಪೂಜಾರಿ ಆರೋಗ್ಯವನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ವಿಚಾರಿಸಿ ಸಾಂತ್ವನ ಹೇಳಿದರು.ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಾಂಬ್ ಸ್ಫೋಟದ ಘಟನೆಯನ್ನ ಖಂಡಿಸುತ್ತೇವೆ. ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರ ಮಾಡಲಾಗಿದೆ. ಇದರ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ತನಿಖೆ ನಡೆಯಲಿದೆ ಎಂದರು.
ಕದ್ರಿ ದೇವಸ್ಥಾನ ಕೆಲವು ಕಚೇರಿ ಹಾಗೂ ಸಾರ್ವಜನಿಕ ಜಾಗಗಳು ಅವರ ಗುರಿಯಾಗಿತ್ತು. ಹಿಂದೂ ಸಮಾಜ ಟಾರ್ಗೆಟ್ ಮಾಡುವ ಅವರ ಕೆಲಸ ವಿಫಲವಾಗಿದೆ. ಸ್ಥಳೀಯ ಮತ್ತು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕೈವಾಡ ಇದೆ ಎಂದರು.
ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಸಚಿವ ಸುನೀಲ್ ಕುಮಾರ್ ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ನಡೆದ ಸ್ಥಳವನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಲಾಯಿತು. ಹಾಗೂ ಸ್ಫೋಟದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಆಟೋ ಚಾಲಕರಾದ ಪುರುಷೋತ್ತಮ ಪೂಜಾರಿ ಅವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಲಾಯಿತು ಎಂದು ಟ್ವೀಟ್ ಮಾಡಿದ್ದಾರೆ.
ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ನಡೆದ ಸ್ಥಳವನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಲಾಯಿತು. ಹಾಗೂ ಸ್ಫೋಟದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಆಟೋ ಚಾಲಕರಾದ ಶ್ರೀ ಪುರುಷೋತ್ತಮ ಪೂಜಾರಿ ಅವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಲಾಯಿತು… pic.twitter.com/bo0SEDCY4m
— Sunil Kumar Karkala (@karkalasunil) November 25, 2022
ವಿಶ್ವ ಮಟ್ಟದಲ್ಲಿ ನ.1 ಸ್ಥಾನ ಕರ್ನಾಟಕದ ಗುರಿ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ