ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಬೆಳಗಾವಿಯ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮತ್ತೆ ತಾರಕಕ್ಕೇರಿದೆ. ಜತ್ತ ತಾಲೂಕಿನ 40 ಗ್ರಾಮಗಳು ಕರ್ನಾಟಕಕ್ಕೆ ಸೇರಬೇಕು ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿರುವಂತ ಹೇಳಿಕೆಗೆ ಮರಾಠಿಗರ ಆಕ್ರೋಶ ತೀವ್ರಗೊಂಡಿದೆ.
ಕಳ್ಳನೇ ತಿರುಗಿ ಬೊಬ್ಬೆ ಹೊಡೆದ ರೀತಿಯಲ್ಲಿ ಬೊಮ್ಮಾಯಿ ಬೊಬ್ಬೆ ಹೊಡೆದುಕೊಳ್ಳುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಕೊಲ್ಲಾಪುರ ಶಿವಸೇನೆ ಉದ್ಧವ್ ಠಾಕ್ರೆ ಬಣದ ಜಿಲ್ಲಾಧ್ಯಕ್ಷ ವಿಜಯ ದೇವಣೆ ವಾಗ್ಧಾಳಿ ನಡೆಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಕಳೆದ 50 ರಿಂದ 60 ವರ್ಷಗಳಿಂದ ಚಳವಳಿ ನಡೆಯುತ್ತಿದೆ, ಕರ್ನಾಟಕಕ್ಕೆ ಮಹಾರಾಷ್ಟ್ರ ಸಾರಿಗೆ ಬಸ್ಗಳ ಪ್ರವೇಶ ನಿರ್ಬಂಧಿಸಲಾಗಿದೆ. ಇದನ್ನೆಲ್ಲ ನೋಡಿದ್ರೆ ಮರಾಠಿಗರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ ಎಂದು ಕಿಡಿಕಾರಿದರು. ಬೊಮ್ಮಾಯಿ ನಡೆ ಇಡೀ ದೇಶಕ್ಕೆ ಗೊತ್ತಾಗಬೇಕೇಂದು ಶವಯಾತ್ರೆ ಮಾಡಿದ್ದೇವೆ ಎಂದು ವಿಜಯ್ ದೇವಣೆ ವಾಗ್ಧಾಳಿ ನಡೆಸಿದ್ದಾರೆ.
ಬೆಳಗಾವಿಯ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮತ್ತೆ ತಾರಕಕ್ಕೇರಿದೆ. ಜತ್ತ ತಾಲೂಕಿನ 40 ಗ್ರಾಮಗಳು ಕರ್ನಾಟಕಕ್ಕೆ ಸೇರಬೇಕು ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿರುವಂತ ಹೇಳಿಕೆಗೆ ಮರಾಠಿಗರ ಆಕ್ರೋಶ ತೀವ್ರಗೊಂಡಿದೆ. ಗಡಿವಿವಾದದ ಕಾರಣ ಮಹಾರಾಷ್ಟ್ರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಗಳಿಗೆ ಕಪ್ಪು ಮಸಿ ಬಳಿದು ಮರಾಠಿ ಭಾಷಿಗಳು ಪುಂಡಾಟಿಕೆ ಮೆರೆದ ಬೆನ್ನಲ್ಲೇ, ಸಿಎಂ ಬಸವರಾಜ ಬೊಮ್ಮಾಯಿ ಅವರ ಅಣಕು ಶವ ಯಾತ್ರೆ ನಡೆಸಿರೋದು ತಿಳಿದು ಬಂದಿದೆ. ಈ ಮೂಲಕ ಗಡಿ ವಿವಾದದ ಕಿಚ್ಚು ಹತ್ತಿಸುವಂತ ಕೆಲಸ ಮಾಡಿದ್ದಾರೆ.