ಬೆಂಗಳೂರು : ಉಗ್ರರು ಹಿಂದೂ ದೇವಾಲಯಗಳನ್ನು ಟಾರ್ಗೆಟ್ ಮಾಡಿರುವ ಘಟನೆಗೆ ಮಂತ್ರಾಲಯ ಮಠದ ಸುಭುದೇಂದ್ರ ತೀರ್ಥ ಸ್ವಾಮೀಜಿ ಖಂಡನೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಗಲಭೆಯಿಂದ ಸೌಹಾರ್ದತೆ ನಾಶವಾಗುತ್ತಿದೆ ನಮ್ಮ ರಾಜ್ಯ ಬಹಳ ಶಾಂತಿ ಪ್ರಿಯವಾಗಿರುವ ನಾಡು, ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಲು ಸಂಚು ರೂಪಿಸಿರುವ ಘಟನೆಯನ್ನು ಖಂಡಿಸುತ್ತೇನೆ , ರಾಜ್ಯ ಸರ್ಕಾರ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಹಿಂದೂ ದೇವಾಲಯಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
‘ಮತದಾರರ ಮಾಹಿತಿ ಕಳವು ಪ್ರಕರಣದಲ್ಲಿ ಮೋದಿ ಸರ್ಕಾರ ಭಾಗಿ’ : ಸುರ್ಜೆವಾಲ ಕಿಡಿ