ಬೆಂಗಳೂರು: ಸಿಎಂ ಕಚೇರಿಯಲ್ಲಿರುವ ಲಂಚ, ಮಂಚದ ಪರಿಣಾಮ ಮಹತ್ವದ ಕಡತಗಳೇ ನಾಪತ್ತೆಯಾಗುವ ಸ್ಥಿತಿ ಒದಗಿದೆ. ಸಿಎಂ ಕಾರ್ಯದರ್ಶಿಯ ಹನಿಟ್ರಾಪ್ ಪ್ರಕರಣವನ್ನು ಬಿಜೆಪಿ ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದರ ಹಿಂದೆ ಅತಿ ದೊಡ್ಡ ಹಗರಣ ಇರುವುದು ನಿಶ್ಚಿತ. ಬಸವರಾಜ ಬೊಮ್ಮಾಯಿ ( Basavaraj Bommai ) ಅವರೇ, ಹನಿಟ್ರಾಪ್ನಿಂದಾಗಿ ಇನ್ನೂ ಯಾವ ಅನಾಹುತಗಳು ಜರುಗಿವೆ? ಎಂದು ಕರ್ನಾಟ ಕಾಂಗ್ರೆಸ್ ( Karnataka Congress ), ರಾಜ್ಯ ಬಿಜೆಪಿ ಸರ್ಕಾರದ ( BJP Government ) ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದೆ.
ಸಿಎಂ ಕಚೇರಿಯಲ್ಲಿರುವ ಲಂಚ, ಮಂಚದ ಪರಿಣಾಮ ಮಹತ್ವದ ಕಡತಗಳೇ ನಾಪತ್ತೆಯಾಗುವ ಸ್ಥಿತಿ ಒದಗಿದೆ.
ಸಿಎಂ ಕಾರ್ಯದರ್ಶಿಯ ಹನಿಟ್ರಾಪ್ ಪ್ರಕರಣವನ್ನು ಬಿಜೆಪಿ ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದರ ಹಿಂದೆ ಅತಿ ದೊಡ್ಡ ಹಗರಣ ಇರುವುದು ನಿಶ್ಚಿತ.@BSBommai ಅವರೇ, ಹನಿಟ್ರಾಪ್ನಿಂದಾಗಿ ಇನ್ನೂ ಯಾವ ಅನಾಹುತಗಳು ಜರುಗಿವೆ?
— Karnataka Congress (@INCKarnataka) November 26, 2022
ಇಂದು ಸರಣಿ ಟ್ವಿಟ್ ಮಾಡಿರುವಂತ ಕಾಂಗ್ರೆಸ್, ಸಿಎಂ ಕಚೇರಿಯಲ್ಲಿ ಮಹತ್ವದ ಕಡತಗಳು ನಾಪತ್ತೆಯಾಗಿರುವುದಕ್ಕೆ ಯಾವ ಕಾರಣ ಹುಡುಕುತ್ತಿದ್ದೀರಿ ಬಸವರಾಜ ಬೊಮ್ಮಾಯಿ ಅವರೇ, ಇಲಿ ಕಚ್ಚಿಕೊಂಡು ಹೋಯಿತೇ? ಹೆಗ್ಗಣ ಹೊತ್ತುಕೊಂಡು ಹೋಯಿತೇ? ಗಾಳಿಯಲ್ಲಿ ಹಾರಿ ಹೋಯಿತೇ? ಉತ್ತರ ಪ್ರದೇಶದಲ್ಲಿ 500 ಕೆಜಿ ಗಾಂಜಾವನ್ನು ಇಲಿಗಳು ತಿಂದವಂತೆ! ನಿಮ್ಮದು “ಯುಪಿ ಮಾಡೆಲ್” ಅಲ್ಲವೇ, ನೀವೂ ಅದೇ ಕಾರಣ ಕೊಡುವಿರಾ? ಎಂದು ಕೇಳಿದೆ.
ಸಿಎಂ ಕಚೇರಿಯಲ್ಲಿ ಮಹತ್ವದ ಕಡತಗಳು ನಾಪತ್ತೆಯಾಗಿರುವುದಕ್ಕೆ ಯಾವ ಕಾರಣ ಹುಡುಕುತ್ತಿದ್ದೀರಿ @BSBommai ಅವರೇ,
ಇಲಿ ಕಚ್ಚಿಕೊಂಡು ಹೋಯಿತೇ?
ಹೆಗ್ಗಣ ಹೊತ್ತುಕೊಂಡು ಹೋಯಿತೇ?
ಗಾಳಿಯಲ್ಲಿ ಹಾರಿ ಹೋಯಿತೇ?ಉತ್ತರ ಪ್ರದೇಶದಲ್ಲಿ 500 ಕೆಜಿ ಗಾಂಜಾವನ್ನು ಇಲಿಗಳು ತಿಂದವಂತೆ! ನಿಮ್ಮದು "ಯುಪಿ ಮಾಡೆಲ್" ಅಲ್ಲವೇ, ನೀವೂ ಅದೇ ಕಾರಣ ಕೊಡುವಿರಾ?
— Karnataka Congress (@INCKarnataka) November 26, 2022
ಸಂವಿಧಾನವನ್ನೇ ಬದಲಿಸಲು ಹೊರಟ ಬಿಜೆಪಿ ಮತದಾರರ ಮಾಹಿತಿ ಕಳ್ಳತನದ ಮೂಲಕ ಸಂವಿಧಾನದ ಆಶಯಗಳಿಗೆ ಕೊಳ್ಳಿ ಇಟ್ಟಿದೆ. ಜನರ ಸಂವಿಧಾನದತ್ತವಾದ ಮತದಾನದ ಹಕ್ಕನ್ನೇ ಕಸಿದು ಪ್ರಜಾಪ್ರಭುತ್ವವನ್ನ ಹೈಜಾಕ್ ಮಾಡಲು ಹೊರಟಿದೆ. ಶಾಸಕರ ಕಳ್ಳತನ, ಮತದಾರರ ಮಾಹಿತಿ ಕಳ್ಳತನ ಎಂಬ ಕ್ಷುದ್ರ ರಾಜಕಾರಣದಿಂದ ಸಂವಿಧಾನಕ್ಕೆ ಅಪಚಾರ ಎಸಗುತ್ತಿದೆ ಬಿಜೆಪಿ ಎಂದು ವಾಗ್ಧಾಳಿ ನಡೆಸಿದೆ.
ಸಂವಿಧಾನವನ್ನೇ ಬದಲಿಸಲು ಹೊರಟ @BJP4Karnataka ಮತದಾರರ ಮಾಹಿತಿ ಕಳ್ಳತನದ ಮೂಲಕ ಸಂವಿಧಾನದ ಆಶಯಗಳಿಗೆ ಕೊಳ್ಳಿ ಇಟ್ಟಿದೆ.
ಜನರ ಸಂವಿಧಾನದತ್ತವಾದ ಮತದಾನದ ಹಕ್ಕನ್ನೇ ಕಸಿದು ಪ್ರಜಾಪ್ರಭುತ್ವವನ್ನ ಹೈಜಾಕ್ ಮಾಡಲು ಹೊರಟಿದೆ.
ಶಾಸಕರ ಕಳ್ಳತನ, ಮತದಾರರ ಮಾಹಿತಿ ಕಳ್ಳತನ ಎಂಬ ಕ್ಷುದ್ರ ರಾಜಕಾರಣದಿಂದ
ಸಂವಿಧಾನಕ್ಕೆ ಅಪಚಾರ ಎಸಗುತ್ತಿದೆ ಬಿಜೆಪಿ.— Karnataka Congress (@INCKarnataka) November 26, 2022