ಬೆಂಗಳೂರು: ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಕಿಂಗ್ ಪಿನ್ ಬೊಮ್ಮಾಯಿ ( Bommai ) ಅವರು ರಾಜೀನಾಮೆ ನೀಡಬೇಕು. ಮುಕ್ತ-ನ್ಯಾಯ ಸಮ್ಮತ ಚುನಾವಣೆ ನಡೆಯಬೇಕೆಂದರೆ 3 ಕ್ಷೇತ್ರಗಳಂತೆಯೇ 224 ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಕು. ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ಈ ಅಕ್ರಮದ ನ್ಯಾಯಾಂಗ ತನಿಖೆ ನಡೆಸಬೇಕು ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ( Farmer CM Siddaramaiah ) ಆಗ್ರಹಿಸಿದ್ದಾರೆ.
ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಕಿಂಗ್ ಪಿನ್ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು.
ಮುಕ್ತ-ನ್ಯಾಯ ಸಮ್ಮತ ಚುನಾವಣೆ ನಡೆಯಬೇಕೆಂದರೆ 3 ಕ್ಷೇತ್ರಗಳಂತೆಯೇ 224 ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಕು.
ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ಈ ಅಕ್ರಮದ ನ್ಯಾಯಾಂಗ ತನಿಖೆ ನಡೆಸಬೇಕು.
– @siddaramaiah pic.twitter.com/GO3XqAmrUl— Karnataka Congress (@INCKarnataka) November 26, 2022
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮತದಾರರ ಮಾಹಿತಿ ಕಳ್ಳತನ ದೇಶದಲ್ಲಿ ಯಾರ ಕಾಲದಲ್ಲೂ ಆಗಿಲ್ಲ, ಆದರೆ ಬಿಜೆಪಿ ಸರ್ಕಾರದಲ್ಲಿ ( BJP Government ) ನಡೆಯುತ್ತಿದೆ! ಇದು ರಾಜ್ಯದ ಜನತೆಗೆ ಮಾಡಿದ ದೊಡ್ಡ ದ್ರೋಹವಾಗಿದ್ದು, ಅತ್ಯಂತ ಗಂಭೀರ ಅಪರಾಧವಾಗಿದೆ. ಹಾಗಾಗಿ ಮುಖ್ಯಮಂತ್ರಿಗಳು ಹಾಗೂ ಬಿಬಿಎಂಪಿ ಆಯುಕ್ತರ ವಿರುದ್ಧ ಕೇಂದ್ರ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮತದಾರರ ಮಾಹಿತಿ ಕಳ್ಳತನ ದೇಶದಲ್ಲಿ ಯಾರ ಕಾಲದಲ್ಲೂ ಆಗಿಲ್ಲ, ಆದರೆ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿದೆ!
ಇದು ರಾಜ್ಯದ ಜನತೆಗೆ ಮಾಡಿದ ದೊಡ್ಡ ದ್ರೋಹವಾಗಿದ್ದು, ಅತ್ಯಂತ ಗಂಭೀರ ಅಪರಾಧವಾಗಿದೆ.
ಹಾಗಾಗಿ ಮುಖ್ಯಮಂತ್ರಿಗಳು ಹಾಗೂ ಬಿಬಿಎಂಪಿ ಆಯುಕ್ತರ ವಿರುದ್ಧ ಕೇಂದ್ರ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು.
– @siddaramaiah pic.twitter.com/apkO5X5jXP— Karnataka Congress (@INCKarnataka) November 26, 2022