ಅಹಮದಾಬಾದ್: ಗುಜರಾತ್ನಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಆಘಾತಕಾರಿ ಘಟನೆಯೊಂದು ನಡೆದಿದೆ. ಸಹೋದ್ಯೋಗಿಯೊಬ್ಬರ ಗುಂಡಿಗೆ ಭಾರತೀಯ ರಿಸರ್ವ್ ಬೆಟಾಲಿಯನ್ (IRB) ನ ಇಬ್ಬರು ಸಿಬ್ಬಂದಿಗಳು ಬಲಿಯಾಗಿದ್ದಾರೆ.
ಗುಜರಾತ್ನ ಪೋರಬಂದರ್ ಬಳಿ ಚುನಾವಣಾ ಕರ್ತವ್ಯದಲ್ಲಿದ್ದ ಸಹೋದ್ಯೋಗಿಯೊಬ್ಬರು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಸಿಬ್ಬಂದಿಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಆರೋಪಿಯನ್ನು ಎಸ್ ಇನೌಚಸಿಂಗ್ ಎಂದು ಗುರುತಿಸಲಾಗಿದೆ. ಗುಜರಾತ್ ಪೊಲೀಸರ ಹೇಳಿಕೆ ಪ್ರಕಾರ, ಆತ ಐಆರ್ಬಿಯಲ್ಲಿ ಕಾನ್ಸ್ಟೆಬಲ್ ಆಗಿದ್ದ ಈ ಯೋಧ ಮಣಿಪುರದ ಸಿಆರ್ಪಿಎಫ್ ಬೆಟಾಲಿಯನ್ಗೆ ಸೇರಿದವರಾಗಿದ್ದಾರೆ. ಆರೋಪಿ ತನ್ನ ರೈಫಲ್ ಎಕೆ-47 ನಿಂದ ಇತರ ಪೊಲೀಸ್ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಹೇಳಿದ್ದಾರೆ.
ಪೋರಬಂದರ್ನ ನವಿ ಬಂದರ್ನಲ್ಲಿ ಐಆರ್ಬಿ ಜವಾನರ ನಡುವೆ ಹೊಡೆದಾಟ ಪ್ರಾರಂಭವಾಯಿತು. ನಂತರ ಈ ದಾಳಿ ನಡೆದಿದೆ. ಹೊಡೆದಾಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಗಾಯಾಳುಗಳನ್ನು ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಭಾವಸಿಂಗ್ಜಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮೃತರನ್ನು ಜವಾನರಾದ ತೊಯ್ಬಾ ಸಿಂಗ್ ಮತ್ತು ಜಿತೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಕಾನ್ಸ್ಟೆಬಲ್ಗಳಾದ ಚೋರಜಿತ್ ಮತ್ತು ರೋಹಿಕಾನಾ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಮಣಿಪುರಕ್ಕೆ ಸೇರಿದವರು.
ಪೋರಬಂದರ್ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಡಿಸೆಂಬರ್ 1 ರಂದು ಮತದಾನ ನಡೆಯಲಿದ್ದು, ಎರಡನೇ ಹಂತದಲ್ಲಿ ಡಿಸೆಂಬರ್ 5 ರಂದು ಮತ್ತು ಫಲಿತಾಂಶ 8 ರಂದು ನಡೆಯಲಿದೆ.
BIG NEWS: ಸೌದಿ ಅರೇಬಿಯಾದಲ್ಲಿ ʻಫಿಫಾ ವಿಶ್ವಕಪ್ 2022ʼ ಪಂದ್ಯಗಳನ್ನು ಪ್ರಸಾರ ಮಾಡದಂತೆ ನಿರ್ಬಂಧ: ವರದಿ
ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ಅರ್ಜಿ ಸಲ್ಲಿಸಿದ ಕನಿಷ್ಠ 7 ದಿನಗಳ ಒಳಗೆ ಭೂ ಪರಿವರ್ತನೆ ಅವಕಾಶ
BIG NEWS: ಸೌದಿ ಅರೇಬಿಯಾದಲ್ಲಿ ʻಫಿಫಾ ವಿಶ್ವಕಪ್ 2022ʼ ಪಂದ್ಯಗಳನ್ನು ಪ್ರಸಾರ ಮಾಡದಂತೆ ನಿರ್ಬಂಧ: ವರದಿ