ಚಿಕ್ಕಬಳ್ಳಾಪುರ : ಎತ್ತಿನ ಹೊಳೆ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳಿಗೆ 23 ಸಾವಿರ ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
SHOCKING NEWS: ಮಗನಿಗೆ ರಾತ್ರಿಯಿಡೀ ʻಟಿವಿ ನೋಡುವ ಶಿಕ್ಷೆʼ ಕೊಟ್ಟ ಪೋಷಕರು: ಯಾಕ್ ಹೀಗ್ ಮಾಡಿದ್ರು ಗೊತ್ತಾ?
ಅವರು ಶನಿವಾರ ಜಿಲ್ಲಾಡಳಿತದಿಂದ ಮಂಚೇನಹಳ್ಳಿ ಹೋಬಳಿಯ ಜರಬಂಡಹಳ್ಳಿಯಲ್ಲಿ ಆಯೋಜಿಸಿದ್ದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಭಾಗದಲ್ಲಿನ ಭವಣೆಯನ್ನು ನೀಗಿಸಲು ಪ್ರಗತಿಯಲ್ಲಿರುವ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳಿಗೆ 23 ಸಾವಿರ ಕೋಟಿ ಅನುದಾನವನ್ನು ಬಿಡುಗಡೆ ಮಾಡಲು ಸದ್ಯದಲ್ಲೇ ಸಚಿವ ಸಂಪುಟ ಸಭೆ ಕರೆದು ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
ಕಂದಾಯ ಇಲಾಖೆಯ ಸೇವೆಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸಲು ಹಲವಾರು ಸುಧಾರಣೆಗಳನ್ನು ತರಲಾಗಿದೆ. ಬ್ರಿಟಿಷರ ಕಾಲದಿಂದ ಮುಂದುವರಿದಿದ್ದ ಹಲವಾರು ಕಾನೂನುಗಳಿಗೆ ಸುಧಾರಣೆ ತಂದು ಜನಸ್ನೇಹಿಯಾಗಿಸಲಾಗಿದೆ. ”ಹಲೋ ಕಂದಾಯ ಸಚಿವರೇ ಯೋಜನೆ” ಮೂಲಕ 72 ಗಂಟೆಯ ಒಳಗೆ ಸಾಮಾಜಿಕ ಭದ್ರತಾ ಯೋಜನೆಗಳ ಪಿಂಚಣಿಯನ್ನು ಮಂಜೂರು ಮಾಡುವ ವ್ಯವಸ್ಥೆ ಜಾರಿ ಮಾಡಿದ್ದೇವೆ. ಕಂದಾಯ ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ರೈತರು ವ್ಯವಸಾಯ ಉದ್ದೇಶಕ್ಕೆ ಬಳಕೆ ಮಾಡಿಕೊಂಡಿದ್ದ ದಾಖಲೆ ರಹಿತ ಜಮೀನುಗಳಿಗೆ ಭೂಮಿ ಮಂಜೂರು ಮಾಡುವ ಮೂಲಕ ಭೂ ಕಬಳಿಕೆ ಹಣೆಪಟ್ಟಿಯಿಂದ ರೈತರನ್ನು ಮುಕ್ತಿಗೊಳಿಸಲಾಗುತ್ತಿದೆ. ಅರ್ಜಿ ಸಲ್ಲಿಸಿದ ಕನಿಷ್ಠ 7 ದಿನಗಳ ಒಳಗೆ ಭೂ ಪರಿವರ್ತನೆ ಮಾಡುವ ನಿಟ್ಟಿನಲ್ಲಿ ಮುಂದಿನ ಅಧಿವೇಶನದಲ್ಲಿ ನಿರ್ಧಾರ ತೆಗೆದುಕೊಂಡು ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು.