ಬೆಂಗಳೂರು : ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಸಂಬಂಧ ಚರ್ಚೆ ನಡೆಸಲು ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
BIGG NEWS : ಪ್ರಧಾನಿ ಮೋದಿ ವಿರುದ್ಧ ನಿಂದನೆ : ಕಾಂಗ್ರೆಸ್ ಶಾಸಕ ಪರಮೇಶ್ವರ್ ನಾಯ್ಕ್ ವಿರುದ್ಧ ದೂರು
ಇಂದು ಸಂಜೆ 7 ಗಂಟೆಗೆ ರೇಸ್ ಕೋರ್ಸ್ ರಸ್ತೆಯ ಸಿಎಂ ನಿವಾಸದಲ್ಲಿ ಸಭೆ ನಡೆಯಲಿದ್ದು, ಕರ್ನಾಟಕ ಗಡಿ, ನದಿ ರಕ್ಷಣಾ ಆಯೋಒಗದ ಅಧ್ಯಕ್ಷ ನ್ಯಾ. ಶಿವರಾಜ ಪಾಟೀಲ್, ಎ.ಜಿ ಪ್ರಭುಲಿಂಗ ನಾವದಗಿ, ಸುಪ್ರೀಂಕೋರ್ಟ್ ನ ಕೆಲ ವಕೀಲರ ಜೊತೆಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕದ ಪರ ವಾದ, ಸರ್ಕಾರದ ನಿಲುವು, ಸರ್ವಪಕ್ಷ ಸಭೆ ಕರೆಯುವ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.
ʻಭಾರತ್ ಜೋಡೋ ಯಾತ್ರೆʼಯಲ್ಲಿ ಬೈಕ್ ರೈಡ್ ಮಾಡಿದ ರಾಹುಲ್ ಗಾಂಧಿ | WATCH VIDEO
ಗಡಿ ವಿವಾದದ ಬಗ್ಗೆ ಚರ್ಚೆ ನಡೆಸಲು ಮುಂದಿನ ವಾರ ಸರ್ವಪಕ್ಷಗಳ ಸಭೆ ಕರೆದಿದ್ದೇನೆ. ಕಾನೂನು ತಜ್ಞರು ಹಾಗೂ ಎಲ್ಲಾ ಪಕ್ಷಗಳ ಮುಖಂಡರ ಜೊತೆ ಸುದೀರ್ಘವಾಗಿ ಚರ್ಚೆ ನಡೆಸಲಾಗುವುದು. ಮುಂದಿನ ಕಾನೂನು ಹೋರಾಟ, ಸುಪ್ರೀಂಕೋರ್ಟ್ನಲ್ಲಿ ನಡೆಯುತ್ತಿರುವ ವಿಚಾರಣೆಗೆ ಯಾವ ರೀತಿಯಲ್ಲಿ ತಯಾರಾಗಬೇಕು ಎನ್ನುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಾಣಗೆರೆಯಲ್ಲಿ ನಿನ್ನೆ ಹೇಳಿದ್ದಾರೆ.