ಚಿಕ್ಕಮಗಳೂರು : ಅಡಿಕೆ ಬೆಳೆಗೆ ತಗಲಿರುವ ಎಲೆ ಚುಕ್ಕಿ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು 10 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದ ನಾಲ್ಕೂ ಜಿಲ್ಲೆಗಳಿಗೆ ಈ ಮೊತ್ತವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.
BIGG NEWS : ವಸತಿ ರಹಿತರಿಗೆ ಗುಡ್ ನ್ಯೂಸ್ : 22 ಸಾವಿರ ಮಂದಿಗೆ ನಿವೇಶನ : ಸಚಿವ ಆರ್. ಅಶೋಕ್ ಘೋಷಣೆ
ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹರಿಹರಪುರ ಹೆಲಿಪ್ಯಾಡ್ ನಲ್ಲಿ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ದುಃಸ್ವಪ್ನದಿಂದ ಹಣಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳಿಗೆ ʻಬೇ ಎಲೆʼ ರಾಮಬಾಣ| benefits of Bay leaf
ಸರ್ಕಾರ ವಿಶ್ವವಿದ್ಯಾಲಯದ ತಂಡ ವನ್ನು ಕಳಿಸಿ ಅಧ್ಯಯನ ಕೈಗೊಂಡಿದೆ. ಕೇಂದ್ರ ಸರ್ಕಾರದ ತಜ್ಞರು ಕೂಡ ಚಿಕ್ಕಮಗಳೂರು ಬಂದು ಅಧ್ಯಯನ ಮಾಡಿದ್ದಾರೆ. ನಿರಂತರವಾಗಿ ಮಳೆ ಇರುವುದರಿಂದ ಹಾಗೂ ಗಾಳಿಯಿಂದ ಒಂದಕ್ಕೊಂದು ಹರಡುತ್ತಿದೆ. ಅದಕ್ಕಾಗಿ ಫಂಗಸ್ ನಿವಾರಣೆಗೆ ಔಷಧಿ ಸಿಂಪಡನೆ ಮಾಡಲಾಗುವುದು. ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ವಿಜ್ಞಾನಿಗಳು ಶಿಫಾರಸು ಮಾಡುವ ಕ್ರಮಗಳನ್ನು ಕೂಡಲೇ ಕೈಗೊಳ್ಳಲಾಗುವುದು ಎಂದರು.
BIGG NEWS : ಮಂಗಳೂರಿನಲ್ಲಿ ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರ ಆರೋಪ : ಇಬ್ಬರ ವಿರುದ್ಧ ದೂರು ದಾಖಲು
ಶಾಸಕ ಕುಮಾರಸ್ವಾಮಿ ( MLA Kumaraswamy ) ಅವರ ಮೇಲೆ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಈಗಾಗಲೇ ಮಾತನಾಡಿ ಎಲ್ಲಾ ರೀತಿಯ ರಕ್ಷಣೆ ನೀಡಲು ಹಾಗೂ ತನಿಖೆ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.