ಚಿಕ್ಕಮಗಳೂರು: ದತ್ತ ಪೀಠ ಈ ಭಾಗದ ಭಾವನೆಗಳ ದೇವಸ್ಥಾನ. ಈ ದೇವಸ್ಥಾನದಲ್ಲಿ ಮೂಲ ಪೂಜೆ ನಡೆಸುವ ಬಗ್ಗೆ ಶಾಸಕ ಸಿಟಿ ರವಿಯವರು ಸುದೀರ್ಘ ಹೋರಾಟ ನಡೆಸಿದ್ದಾರೆ. ಈಗಾಗಲೇ ಕಾನೂನಾತ್ಮಕ ಹೊರಾಟ ನಡೆದಿದ್ದು, ಸೂಕ್ತ ಪರಿಹಾರ ದೊರೆಯಲಿದೆ. ಮುಳ್ಳಯ್ಯನಗಿರಿ ಹಾಗೂ ದತ್ತ ಪೀಠದ ನಡುವೆ ರೋಪ್ ವೇ ನಿರ್ಮಿಸಲು ಆಯವ್ಯಯದಲ್ಲಿ ಅನುದಾನವನ್ನು ಮೀಸಲಿರಿಸಿದ್ದು, ಈ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಒಂದೇ ವರ್ಷದಲ್ಲಿ 8000 ವಿವೇಕ ಶಾಲಾ ಕೊಠಡಿಗಳ ನಿರ್ಮಾಣ – ಸಿಎಂ ಬಸವರಾಜ ಬೊಮ್ಮಾಯಿ
ನಗರದಲ್ಲಿ ಇಂದು ನಡೆದಂತ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಈ ಭಾಗದಲ್ಲಿ ಆನೆ ಹಾವಳಿ ಹೆಚ್ಚಿದೆ ಅದಕ್ಕೆ ಪರಿಹಾರ ಕಂಡುಕೊಳ್ಳಲು ಹೊಸ ತಂತ್ರಜ್ಞಾನ ಬಳಕೆ ಮಾಡಿಕೊಳ್ಳುತ್ತಿದ್ದೇವೆ ಆನೆ ದಾಳಿಯಿಂದ ಜೀವ ಹಾನಿಯಾದರೆ 15 ಲಕ್ಷಪರಿಹಾರ ನೀಡಲಾಗುತ್ತಿದೆ. ಆನೆ ದಾಳಿಯನ್ನು ತಡೆಯಲು ಪ್ರತಿ ಜಿಲ್ಲೆಗೆ ಸ್ಕ್ವಾಡ್ ರಚಿಸಲಾಗಿದೆ ಎಂದರು.
ಶೀಘ್ರವೇ ಶೃಂಗೇರಿಯಲ್ಲಿ 100 ಹಾಸಿಗೆಯ ಆಸ್ಪತ್ರೆ ಯೋಜನೆ ಪ್ರಾರಂಭ – ಸಿಎಂ ಬಸವರಾಜ ಬೊಮ್ಮಾಯಿ
ಮಲೆನಾಡು ಭಾಗದಲ್ಲಿ ಅಕ್ರಮ ಒತ್ತುವರಿ ಬಗ್ಗೆ ಸಮಸ್ಯೆ ಇದೆ. ಕಾಫಿ ಬೆಳೆಗಾರರ ಸಮಸ್ಯೆಗಳನ್ನು ನಿವಾರಿಸಲು ಕಂದಾಯ ಇಲಾಖೆಯವರು ಶೀಘ್ರ ಪರಿಹಾರ ಕಂಡುಕೊಳ್ಳಲಿದ್ದಾರೆ.ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಬಂದಿದೆ. ಔಷಧಿ ಸಿಂಪಡನೆ ಹಾಗೂ ರೋಗ ಹರಡದಂತೆ ಪರಿಹಾರ ಕಂಡುಕೊಳ್ಳಲು 10 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕೇಂದ್ರ ತಂಡ ಬಂದು ಪರಿಶೀಲನೆ ನಡೆಸಿದೆ. ಈ ಭಾಗದ ಪ್ರವಾಹ ಬಂದು ಹಾಳಾಗಿರುವ ರಸ್ತೆಗಳ ದುರಸ್ತಿಗೆ 5.80 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಇನ್ನೂ 5 ಕೋಟಿ ರೂ. ಹೆಚ್ಚಿನ ಅನುದಾನವನ್ನು ಬಿಡುಗಡೆ ನಿನ್ನೆಯಷ್ಟೇ ಬಿಡುಗಡೆ ಮಾಡಲಾಗಿದೆ ಎಂದರು.
BIG NEWS: ರಾಜ್ಯದಲ್ಲಿ ಮತ್ತೆ ಶುರುವಾಯ್ತು ‘ಮೀಸಲಾತಿ ಮಹಾಯುದ್ಧ’: ಸರ್ಕಾರಕ್ಕೆ ‘ಒಕ್ಕಲಿಗ ಸಮುದಾಯ’ದ ಡೆಡ್ ಲೈನ್
ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವರಾದ ಭೈರತಿ ಬಸವರಾಜ್, ಗೋವಿಂದ ಕಾರಜೋಳ, ಮಾಜಿ ಸಚಿವ ಡಿ.ಎನ್. ಜೀವರಾಜ್ ಹಾಗೂ ಚಿಕ್ಕಮಗಳೂರು ಜಿಲ್ಲೆ ಶಾಸಕರು ಸೇರಿ ಹಲವರು ಉಪಸ್ಥಿತರಿದ್ದರು.