ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಿನ್ನೆ ಸಂಜೆ ಮಹತ್ವದ ಸಭೆ ನಡೆದಿದ್ದು, ಸರ್ವಪಕ್ಷ ಸಭೆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
BIGG NEWS : ಅಡಕೆಗೆ ಎಲೆ ಚುಕ್ಕೆ ರೋಗವನ್ನು ತಡೆಗಟ್ಟಲು 10 ಕೋಟಿ ರೂ. ಬಿಡುಗಡೆ : ಸಿಎಂ ಬೊಮ್ಮಾಯಿ
ಸಭೆ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ನೇಮಕವಾದ ಬಳಿಕ ಮೊದಲ ಸಭೆ ಮಾಡಿದ್ದೇವೆ. ಗಡಿ ವಿವಾದದ ಬಗ್ಗೆ ಇಲ್ಲಿಯವರೆಗೆ ನಡೆದಿರುವುದರ ಬಗ್ಗೆ ಚರ್ಚೆ ಮಾಡಿದ್ದೇವೆ. ಸುಪ್ರೀಂ ಕೋರ್ಟ್ನಲ್ಲಿ ಯಾವ ರೀತಿ ವಾದ ಮಾಡಬೇಕು ಎಂದು ಚರ್ಚೆ ಮಾಡಲಾಗಿದೆ ಎಂದು ಹೇಳಿದ್ದಾರೆ.
BIG NEWS: ಭಾರತ್ ಜೋಡೋ ಯಾತ್ರೆ ವೇಳೆ ಕಾಲ್ತುಳಿತ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ʻಕೆಸಿ ವೇಣುಗೋಪಾಲ್ʼಗೆ ಗಾಯ
ನವೆಂಬರ್ 29 ರಂದು ದೆಹಲಿಗೆ ಹೋಗಿ ಮುಖಲ್ ರೋಹ್ಟಗಿ ಅವರಿಗೆ ಭೇಟಿ ಮಾಡಿ ಚರ್ಚೆ ಮಾಡುತ್ತೇನೆ. ಸರ್ವಪಕ್ಷ ಸಭೆ ಬಗ್ಗೆ ವಿರೋಧ ಪಕ್ಷದ ನಾಯಕರ ಜೊತೆ ಮಾತನಾಡುತ್ತೇನೆ. ಅವರ ಜೊತೆ ಮಾತನಾಡಿ ಸರ್ವ ಪಕ್ಷ ಸಭೆ ಬಗ್ಗೆ ತಿರ್ಮಾನ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.