ಬೆಂಗಳೂರು : ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದದ ಸಂಬಂಧ ಮಹಾರಾಷ್ಟ್ರದಲ್ಲಿ ಕಿಡಿಗೇಡಿಗಳ ಪುಂಡಾಟ ಮುಂದುವರೆದಿದ್ದು, ಮುಂಬೈನ ಮಾಹಿಮ್ ಬಸ್ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪೋಸ್ಟರ್ಗೆ ಕಪ್ಪು ಮಸಿ ಬಳಿಯಲಾಗಿದೆ.
ಬಾಗಲಕೋಟೆ: ವೃದ್ಧ ನುಂಗಿದ್ದ 187 ನಾಣ್ಯಗಳನ್ನ ಯಶಸ್ವಿಯಾಗಿ ಹೊರ ತೆಗೆದ ವೈದ್ಯರು!
ಮುಂಬೈನ ಮಾಹಿಮ್ ಬಸ್ ನಿಲ್ದಾಣದಲ್ಲಿ ರಾಜ್ಯದ ಪ್ರವಾಸೋದ್ಯಮದ ಜಾಹೀರಾತು ಇದ್ದ ಪೋಸ್ಟರ್ನಲ್ಲಿನ ಸಿಎಂ ಬೊಮ್ಮಾಯಿ, ಸಚಿವ ಆನಂದ್ ಸಿಂಗ್ ಅವರ ಚಿತ್ರಕ್ಕೆ ಕಪ್ಪು ಬಣ್ಣ ಬಳಿಯಲಾಗಿದೆ. ಶುಕ್ರವಾರ ರಾಜ್ಯದ ಸರ್ಕಾರಿ ಸ್ವಾಮ್ಯದ ಬಸ್ಗಳ ಮೇಲೆ ಮರಾಠಾ ಪರ ಸಂಘಟನೆಯ ಕಾರ್ಯಕರ್ತರ ಗುಂಪು ಮಹಾರಾಷ್ಟ್ರ ಪರ ಘೋಷಣೆಗಳನ್ನು ಬರೆದಿದ್ದರು. ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಿನ್ನೆ ಸಂಜೆ ಮಹತ್ವದ ಸಭೆ ನಡೆದಿದ್ದು, ರಾಜ್ಯದ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ನೇಮಕವಾದ ಬಳಿಕ ಮೊದಲ ಸಭೆ ಮಾಡಿದ್ದೇವೆ. ಗಡಿ ವಿವಾದದ ಬಗ್ಗೆ ಇಲ್ಲಿಯವರೆಗೆ ನಡೆದಿರುವುದರ ಬಗ್ಗೆ ಚರ್ಚೆ ಮಾಡಿದ್ದೇವೆ. ಸುಪ್ರೀಂ ಕೋರ್ಟ್ನಲ್ಲಿ ಯಾವ ರೀತಿ ವಾದ ಮಾಡಬೇಕು ಎಂದು ಚರ್ಚೆ ಮಾಡಲಾಗಿದೆ ಎಂದು ಹೇಳಿದ್ದಾರೆ.