ರೂಪನಗರ (ಪಂಜಾಬ್): ಶ್ರೀ ಕಿರಾತ್ಪುರ ಸಾಹಿಬ್ ಬಳಿ ಭಾನುವಾರ ಮೂವರು ಮಕ್ಕಳು ಪ್ಯಾಸೆಂಜರ್ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಘಟನೆಯ ಕುರಿತು ಪಂಜಾಬ್ ಸರ್ಕಾರ ತನಿಖೆಗೆ ಆದೇಶಿಸಿದೆ.
ಸಟ್ಲೆಜ್ ನದಿಯ ಸೇತುವೆಯ ಸಮೀಪವಿರುವ ರೈಲ್ವೇ ಹಳಿಯ ಬಳಿ ವಲಸೆ ಕಾರ್ಮಿಕರ ನಾಲ್ವರು ಮಕ್ಕಳು ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ನಾಲ್ಕನೇ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಮಕ್ಕಳು 7 ರಿಂದ 11 ವರ್ಷದೊಳಗಿನವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಂಜಾಬ್ ಶಾಲಾ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಈ ಘಟನೆ ಸುದ್ದಿ ತಿಳಿದು ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದರು.
ಇನ್ನೂ, ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡುವಂತೆ ಕೋರಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ.
BREAKING NEWS : ವಿಜಯಪುರದಲ್ಲಿ ಘೋರ ದುರಂತ : ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ
ಬ್ಯಾಂಕ್ ಗ್ರಾಹಕರೇ ಗಮನಿಸಿ: ʻಡಿಸೆಂಬರ್ʼ ತಿಂಗಳಲ್ಲಿ ಬ್ಯಾಂಕುಗಳಿಗೆ 13 ದಿನ ರಜೆ |Bank Holidays December 2022
ಬಾಗಲಕೋಟೆ: ವೃದ್ಧ ನುಂಗಿದ್ದ 187 ನಾಣ್ಯಗಳನ್ನ ಯಶಸ್ವಿಯಾಗಿ ಹೊರ ತೆಗೆದ ವೈದ್ಯರು!
BREAKING NEWS : ವಿಜಯಪುರದಲ್ಲಿ ಘೋರ ದುರಂತ : ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ