ಬೆಳಗಾವಿ: ಕರ್ನಾಟಕ ಮಹಾರಾಷ್ಟ್ರಗಡಿ ವಿವಾದವು ದಿನೇ ದಿನೆ ಉಗ್ರ ಹೋರಾಟದ ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.
ಅಲ್ಲಿನ ಗಡಿಯಲ್ಲಿರುವ ಕೆಲವು ತಾಲೂಕಿನವರು ತಮ್ಮನ್ನು ಕರ್ನಾಟಕಕ್ಕೆ ಸೇರಿಸಿ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿಯೂ ಪ್ರತಿಭಟನೆಗಳು ನಡೆಯುತ್ತಿದೆ. ಇದರ ಬೆನ್ನಲ್ಲೇ ನಾಡದ್ರೋಹಿ ಎಂಇಎಸ್ ಉದ್ಧಟತನವನ್ನು ಪ್ರದರ್ಶನ ಮಾಡಿದ್ದು, ಬೆಳಗಾವಿಗೆ ಆಗಮಿಸುವಂತೆ ಮಹಾರಾಷ್ಟ್ರ ಗಡಿ ಸಮನ್ವಯ ಸಚಿವದ್ವಯರಿಗೆ ಪತ್ರ ಬರೆದಿದೆ.
ಈ ಮೂಲಕ ಗಡಿ ವಿಚಾರದಲ್ಲಿ ಎಂಇಎಸ್ ಮತ್ತೆ ಕ್ಯಾತೆ ತೆಗೆದಿದೆ. ರಾಜ್ಯದ ಕನ್ನಡಿಗರು, ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.