ನವದೆಹಲಿ : ದಕ್ಷಿಣ ಜಿಲ್ಲೆಯ ಇಂಡಿಯನ್ ಪಬ್ಲಿಕ್ ಸ್ಕೂಲ್’ನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದ್ದು, ಸ್ಥಳದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಇನ್ನು ಬಾಂಬ್ ನಿಷ್ಕ್ರಿಯ ದಳವೂ ದೌಡಾಯಿಸಿದೆ.
ದೆಹಲಿ ಪೊಲೀಸರು ಮಾಹಿತಿ ನೀಡಿದ್ದು, ಬಾಂಬ್ ಸ್ಫೋಟಿಸುವ ಬೆದರಿಕೆ ಇಮೇಲ್ ಬಂದಿದೆ. ಹೀಗಾಗಿ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಬಾಂಬ್ ನಿಷ್ಕ್ರಿಯ ದಳವನ್ನು ಅಲ್ಲಿಗೆ ಕಳುಹಿಸಲಾಗಿದೆ ಎಂದಿದ್ದಾರೆ.