ಶಿವಮೊಗ್ಗ : ಮಂಗಳೂರು ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಶಾರೀಖ್ ಆರೋಗ್ಯ ಸುಧಾರಣೆಯಾದ ಬಳಿಕ ವಿಚಾರಣೆ ನಡೆಸುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಂಗಳೂರು ಸ್ಪೋಟ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಶಾರೀಖ್ ಆರೋಗ್ಯ ಸುಧಾರಣೆಯಾದ ಬಳಿಕ ವಿಚಾರಣೆ ನಡೆಸುತ್ತೇವೆ, ಶಂಕಿತ ಉಗ್ರ ಮತೀನ್ ಎಲ್ಲೇ ಇದ್ದರೂ ಪತ್ತೆ ಹಚ್ಚಲಿದ್ದೇವೆ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಚಲಿಸುತ್ತಿರುವ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಬಗ್ಗೆ ರಾಜ್ಯ ಸರ್ಕಾರ ಎನ್ಐಎ ತನಿಖೆಗೆ ಶಿಫಾರಸು ಮಾಡಿದೆ. ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ, ಪ್ರಾಥಮಿಕ ತನಿಖೆಯ ಸಮಯದಲ್ಲಿ ಸಂಗ್ರಹಿಸಿದ ಪುರಾವೆಗಳು ಮತ್ತು ಇತರ ಮಾಹಿತಿಗಳ ಆಧಾರದ ಮೇಲೆ ಎನ್ಐಎ ತನಿಖೆಗೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಎಂದು ಗೃಹ ಸಚಿವರು ಇತ್ತೀಚೆಗೆ ತಿಳಿಸಿದ್ದರು.
ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ನವೆಂಬರ್ 19 ರಂದು ಸ್ಫೋಟ ಸಂಭವಿಸಿದ್ದು, ಇದನ್ನು ಪೊಲೀಸರು ಭಯೋತ್ಪಾದನಾ ಕೃತ್ಯ ಎಂದು ಕರೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಮೊಹಮ್ಮದ್ ಶರೀಕ್ (24) ಎಂಬಾತನೇ ಸ್ಫೋಟಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದಲ್ಲಿ ಗಾಯಗೊಂಡಿರುವ ಶಾರೀಕ್ ಮತ್ತು ಆಟೋರಿಕ್ಷಾ ಚಾಲಕ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
‘ಅನುದಾನಿತ ಪದವಿ ಕಾಲೇಜು’ಗಳ ‘ಪ್ರಾಂಶುಪಾಲ’ರಿಗೆ ಗುಡ್ ನ್ಯೂಸ್: ಗಳಿಕೆ ರಜೆ ಮಂಜೂರು
ಹಿಂದೂಗಳ ಹತ್ಯೆ ನಡೆಯುತ್ತದೆ ಎನ್ನುವುದಕ್ಕೆ ಸಿ.ಟಿ ರವಿ ಬ್ರಹ್ಮನಾ..? : ಶಾಸಕ ಅಮರೇಗೌಡ