ನವದೆಹಲಿ : ಶಾಲೆಗಳಲ್ಲಿ 6 ರಿಂದ 12ನೇ ತರಗತಿಯ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ನೀಡುವಂತೆ ಸಲ್ಲಿಸಿದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ರಾಜ್ಯಗಳಿಗೆ ನೋಟಿಸ್ ಜಾರಿ ಮಾಡಿದೆ. ಸರಕಾರಿ, ಸರಕಾರಿ ಅನುದಾನಿತ ಹಾಗೂ ವಸತಿ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ನೀಡುವುದರ ಜತೆಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ 6 ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ಗಳನ್ನ ಒದಗಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಸುಪ್ರೀಂಕೋರ್ಟ್ ಇಂದು ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಉತ್ತರ ಕೇಳಿದೆ. ಸಾಮಾಜಿಕ ಕಾರ್ಯಕರ್ತೆ ಜಯಾ ಠಾಕೂರ್ ಅವರ ಮನವಿಯನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರ ಪೀಠವು ಕೇಂದ್ರ ಸರ್ಕಾರ ಮತ್ತು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ಜಾರಿ ಮಾಡಿದೆ.
ಮಧ್ಯಪ್ರದೇಶದ ನಿವಾಸಿ ಜಯಾ ಠಾಕೂರ್ ಅವ್ರು ವೃತ್ತಿಯಲ್ಲಿ ವೈದ್ಯರಾಗಿದ್ದಾರೆ. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಸಹಾಯವನ್ನು ಕೋರಿದೆ. ಅರ್ಜಿದಾರರು ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಹೆಣ್ಣುಮಕ್ಕಳ ನೈರ್ಮಲ್ಯದ ಪ್ರಮುಖ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂದು ಹೇಳಲಾಗಿದೆ.
ಸಾಮಾಜಿಕ ಕಾರ್ಯಕರ್ತೆ ಜಯ ಠಾಕೂರ್ ಅವರು ವರೀಂದರ್ ಕುಮಾರ್ ಶರ್ಮಾ ಮತ್ತು ವರುಣ್ ಠಾಕೂರ್ ಮೂಲಕ ಸಲ್ಲಿಸಿದ ಅರ್ಜಿಯಲ್ಲಿ, ಬಡ ಮನೆಗಳ 11 ರಿಂದ 18 ವರ್ಷದೊಳಗಿನ ಹುಡುಗಿಯರು ಪಿರಿಯಡ್ಸ್ ಸಮಯದಲ್ಲಿ ನೈರ್ಮಲ್ಯವನ್ನ ಕಾಪಾಡಿಕೊಳ್ಳುವಲ್ಲಿ ಸಮಸ್ಯೆಗಳನ್ನ ಎದುರಿಸುತ್ತಾರೆ. ಅನೇಕ ಹುಡುಗಿಯರಿಗೆ ಮುಟ್ಟಿನ ಬಗ್ಗೆ ತಿಳಿದಿರುವುದಿಲ್ಲ. ಅವರ ತಂದೆ-ತಾಯಿ ಕೂಡ ವಿದ್ಯಾವಂತರಲ್ಲ. ಕಳಪೆ ಆರ್ಥಿಕ ಪರಿಸ್ಥಿತಿಗಳು ಮತ್ತು ಅನಪೇಕ್ಷಿತ ಸಾಂಸ್ಕೃತಿಕ ಅಭ್ಯಾಸಗಳಿಂದ, ಈ ಹುಡುಗಿಯರ ಆರೋಗ್ಯವು ಗಂಭೀರವಾಗಿ ಪರಿಣಾಮ ಬೀರುತ್ತದೆ. ಇನ್ನು ಈ ಕಾರಣದಿಂದಾಗಿ ಈ ಹುಡುಗಿಯರು ಸಹ ಶಾಲೆಗೆ ಹೋಗುವುದಿಲ್ಲ. ಇದಕ್ಕಾಗಿ ಜಾಗೃತಿ ಮೂಡಿಸುವುದು ಅತೀ ಅಗತ್ಯವಾಗಿದೆ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಹಿಂದುಳಿದ ವರ್ಗಗಳ ಮಹಿಳೆಯರು ಮತ್ತು ಹೆಣ್ಣು ಮಕ್ಕಳಿಗೆ ಸ್ವಚ್ಛತೆ ಸೌಲಭ್ಯಗಳು ಮತ್ತು ಸ್ಯಾನಿಟರಿ ಪ್ಯಾಡ್ಗಳಂತಹ ಸೌಲಭ್ಯಗಳನ್ನ ಉಚಿತವಾಗಿ ಒದಗಿಸಬೇಕು.
Good News: ಇನ್ಮುಂದೆ ʼನಮ್ಮ ಕ್ಲಿನಿಕ್ʼ ಮೂಲಕ 30 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಗೂ ‘ಮಧುಮೇಹದ ತಪಾಸಣೆ’
Video: ‘ರೈಲ್ವೆ ಟಿಕೆಟ್ ಸೆಂಟರ್’ನಲ್ಲಿ ‘ಟಿಕೆಟ್ ಖರೀದಿ’ಸೋ ಮುನ್ನಾ ಈ ಸುದ್ದಿ ಓದಿ : ನೀವು ಶಾಕ್ ಆಗೋದು ಗ್ಯಾರಂಟಿ.!
ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut